ನಲ್ಲೂರು ಗ್ರಾಮದ ರೈತ ನಾಯಕ ಚೆಟ್ರುಮಾಡ ಸುಜಯ್ ಬೋಪಯ್ಯ ಅವರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಕಾಯಕ ರೈತ ಕಾರ್ಮಿಕರು, ಕೃಷಿ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ಭತ್ತದ ನಾಟಿ ಕಾರ್ಯದಲ್ಲಿ ಭಾಗವಹಿಸಿದರು. ಭತ್ತದ ಕೃಷಿಯ ಮಹತ್ವವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಪರಿಚಯಿಸುವುದು ಮತ್ತು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಉತ್ತೇಜಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹುದೂರಿನ ಪ್ರಗತಿಪರ ರೈತ ರವಿಶಂಕರ್ ಭಾಗವಹಿಸಿದ್ದರು. ಮೊದಲಿಗೆ ಗಣ್ಯರು ಭತ್ತದ ಸಸಿಮಡಿಗೆ ನೀರು ಎರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.