ಪತ್ರಿಕೆ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ

ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ತಹಶೀಲ್ದಾರ್ ಪ್ರವೀಣ್ ಕುಮಾರ್ ,  ಅನು ಕಾರ್ಯಪ್ಪ,  ಸವಿತಾ ರೈ, ರೆಜಿತ್ ಕುಮಾರ್, ಪುತ್ತಂ ಪ್ರದೀಪ್, ಬೋಪಣ್ಣ, ರೈಮಂಡ್ ಇದ್ದರು.
ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ತಹಶೀಲ್ದಾರ್ ಪ್ರವೀಣ್ ಕುಮಾರ್ , ಅನು ಕಾರ್ಯಪ್ಪ, ಸವಿತಾ ರೈ, ರೆಜಿತ್ ಕುಮಾರ್, ಪುತ್ತಂ ಪ್ರದೀಪ್, ಬೋಪಣ್ಣ, ರೈಮಂಡ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಪ್ರವೀಣ್‌ಕುಮಾರ್ ಕಿವಿಮಾತು

ವಿರಾಜಪೇಟೆ :

ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವುದರ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ವಿರಾಜಪೇಟೆ ತಹಸೀಲ್ದಾರ್ ಪ್ರವೀಣ್ ಕುಮಾರ್ ಕಿವಿಮಾತು ಹೇಳಿದರು.

ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ವಿರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪತ್ರಿಕೆಗಳಲ್ಲಿ ವಿಶ್ವದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಇರಲಿದೆ. ಪ್ರತಿದಿನ ಸಮಯ ಮಾಡಿಕೊಂಡು ಪತ್ರಿಕೆಗಳನ್ನು ಓದಬೇಕು ಎಂದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅನು ಕಾರ್ಯಪ್ಪ ಮಾತನಾಡಿ, ಪತ್ರಿಕೆಗಳನ್ನು ಕೊಂಡು ಓದುವವರ ಸಂಖ್ಯೆ ಕಡಿಮೆಯಾಗಿದೆ. ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ಬರೆದಿದ್ದು, ವಿಷಯವನ್ನು ವಿವರವಾಗಿ ಬರೆಯಬೇಕು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ ಮಾತನಾಡಿ, ಡಿಜಿಟಲ್ ಯುಗದಲ್ಲಿ ಪತ್ರಿಕೆಗಳನ್ನು ಓದುವುದು ಕಡಿಮೆಯಾಗಿದೆ. ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಪತ್ರಿಕೆಗಳನ್ನು ಓದುವಂತಾಗಬೇಕು. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ನೀಡಿ, ಉತ್ತಮ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು.
ರಾಷ್ಟ್ರೀಯ ಸಮಿತಿ ಸದಸ್ಯರಾದ ಪಾರ್ಥ ಚಿಣ್ಣಪ್ಪ ಮಾತನಾಡಿದರು. ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್, ವೇದಿಕೆಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರೈಮಂಡ, ಹಿರಿಯ ಉಪನ್ಯಾಸಕಿ ದಮಯಂತಿ, ಜಿಲ್ಲಾ ಸಂಘದ ಉಪಾಧ್ಯಕ್ಷ ಎ.ಎನ್ ವಾಸು, ನಿರ್ದೇಶಕ ರವಿಕುಮಾರ್ ಎಂ.ಕೆ, ಸಂತೋಷ್ ರೈ, ವಿರಾಜಪೇಟೆ ತಾಲೂಕು ಸಂಘದ ಉಪಾಧ್ಯಕ್ಷ ಪುತ್ತಂ ಪ್ರದೀಪ್, ಖಜಾಂಚಿ ಹೇಮಂತ್ ಕುಮಾರ್, ನಿರ್ದೇಶಕರಾದ ಡಿ.ಮಂಜುನಾಥ್, ತೇಜಸ್ ಪಾಪಯ್ಯ, ಸದಸ್ಯರಾದ ಕಾಂಗೀರ ಬೋಪಣ್ಣ, ನೌಫಲ್ ಕಡಂಗ ಹಾಜರಿದ್ದರು.

ಪತ್ರಿಕಾ ದಿನಾಚರಣೆ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅರಣ್ಯ ಜೀವ ವೈವಿಧ್ಯ ಮತ್ತು ಜಲಮೂಲಗಳ ಸಂರಕ್ಷಣೆ ಎಂಬ ವಿಷಯದಲ್ಲಿ ಹಮ್ಮಿಕೊಂಡಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಇತಾ ಟಿ.ಎಂ ಪ್ರಥಮ, ನಿತ್ಯ ಪಿ.ಎನ್ ದ್ವಿತೀಯ, ಕೌಸಲ್ಯಾ ಪಿ.ಎಸ್ ತೃತೀಯ ಬಹುಮಾನ ಪಡೆದರು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪಶ್ಚಿಮಘಟ್ಟದ ಪರಿಸರದ ಮಹತ್ವ ಎಂಬ ವಿಷಯದಲ್ಲಿ ನಡೆದ ಸ್ಪರ್ಧೆಯಲ್ಲಿ ಕೃತಿಕ ಎಂ.ಎಸ್ ಪ್ರಥಮ, ರಂಜಿತ ವೈ.ಎಂ ದ್ವಿತೀಯ ಹಾಗೂ ಇಸ್ಮಾ ಬೀಬಿ ತೃತೀಯ ಬಹುಮಾನ ಪಡೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net