ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಧಾರ್ಮಿಕ ವೈಭವ

ಅವಂದೂರಿನ ಇತಿಹಾಸ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸ್ಪರ್ಧೆ ಏರ್ಪಡಿಸಲಾಗಿತ್ತು.
ಅವಂದೂರಿನ ಇತಿಹಾಸ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸ್ಪರ್ಧೆ ಏರ್ಪಡಿಸಲಾಗಿತ್ತು.
Published on
ನಾಪೋಕ್ಲು: ಅವಂದೂರಿನ ಇತಿಹಾಸ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ಪ್ರಯುಕ್ತ ಶ್ರೀ ಕೃಷ್ಣನಿಗೆ ಕ್ಷೀರಾಭಿಷೇಕ ಮತ್ತು ವಿಧಿವಿಧಾನಗಳ ವಿಶೇಷ ಪೂಜೆ ಕೈಂಕರ್ಯ ಜರುಗಿದವು. ಬಳಿಕ ನೆರೆದಿದ್ದ ಭಕ್ತರಿಗೆ ತೀರ್ಥ ಪ್ರಸಾದ ಮತ್ತು ಉಪಾಹಾರ ವಿತರಿಸಲಾಯಿತು. ಧಾರ್ಮಿಕ ಕಾರ್ಯ ದೇವಸ್ಥಾನದ ಪ್ರಧಾನ ಅರ್ಚಕ ದಿನೇಶ್ ಭಟ್ ನೇತೃತ್ವದಲ್ಲಿ ನೆರವೇರಿದವು.
ಶ್ರೀಕೃಷ್ಣ, ರಾಧೆ ಹಾಗೂ ರುಕ್ಮಿಣಿ ಛದ್ಮವೇಶ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಗಣ್ಯರು ನೆನಪಿನ ಸ್ಮರಣಿಕೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ, ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net