ನಿವೇಶನಕ್ಕಾಗಿ ಅರೆಸೇನಾಪಡೆ ನಿವೃತ್ತ ಯೋಧರ ಮನವಿ

 ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿ ಮಾಡಿದ ಕೊಡಗು ಜಿಲ್ಲೆಯಲ್ಲಿ ಇರುವ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ಪದಾಧಿಕಾರಿಗಳು ತಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು. ಡಾ. ಮಂತರ್ ಗೌಡ, ಎಂ.ಜಿ. ಯತೀಶ್, ನೂರೇರಾ ಭೀಮಯ್ಯ, ಜಿ.ಕೆ. ದಿನೇಶ್ ಕುಮಾರ್ ಮತ್ತಿತರರು ಇದ್ದರು.

Published on
ಕುಶಾಲನಗರ:
ಇತ್ತೀಚೆಗೆ ಕುಶಾಲನಗರಕ್ಕೆ ಆಗಮಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿ ಮಾಡಿದ ಕೊಡಗು ಜಿಲ್ಲೆಯಲ್ಲಿ ಇರುವ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟ ತಮ್ಮ ಅಹವಾಲು ಹೇಳಿಕೊಂಡು ಮನವಿ ಸಲ್ಲಿಸಿತು. ಅರೆಸೇನಾಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾದ ಮಾಜಿ ಸೈನಿಕರು ಸೇರಿ ಕಳೆದ 13 ವರ್ಷಗಳಿಂದ ಮಡಿಕೇರಿಯ ಮಹದೇವಪೇಟೆಯಲ್ಲಿ ಖಾಸಗಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದು ಕಚೇರಿ ತೆರೆದಿದ್ದೇವೆ. ಜಿಲ್ಲೆಯಲ್ಲಿ ಸುಮಾರು 4 ಸಾವಿರದಷ್ಟು ಅರೆಸೇನಾಪಡೆಯ ಯೋಧರು ಇದ್ದೇವೆ. ಮಾಜಿ ಯೋಧರ ಬೇಡಿಕೆಗಳು, ಯೋಧರ ವಿಧವಾ ಪತ್ನಿಯರು ಹಾಗೂ ಮಕ್ಕಳ ಯೋಗಕ್ಷೇಮಕ್ಕಾಗಿ ಒಕ್ಕೂಟ ಕಾರ್ಯ ನಿರ್ವಹಿಸುತ್ತಿದೆ. ಆದ್ದರಿಂದ ಒಕ್ಕೂಟದ ವತಿಯಿಂದ ಗುರುತಿಸಿರುವ ಕುಶಾಲನಗರದ ಮುಳ್ಳುಸೋಗೆಯ ಸರ್ಕಾರಿ ಭೂಮಿಯಲ್ಲಿ ಒಕ್ಕೂಟಕ್ಕೆ ಸೂಕ್ತ ನಿವೇಶನ ದೊರಕಿಸಿಕೊಡಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು ಸಚಿವರಲ್ಲಿ ಮನವಿ ಮಾಡಿದರು.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಒಕ್ಕೂಟದ ಅಧ್ಯಕ್ಷ ಎಂ.ಜಿ. ಯತೀಶ್, ಸಂಚಾಲಕ ನೂರೇರಾ ಭೀಮಯ್ಯ, ನಿರ್ದೇಶಕÀ ಜಿ.ಕೆ. ದಿನೇಶ್ ಕುಮಾರ್ ಮತ್ತು ಪದಾಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net