ನಿವೃತ್ತರಿಗೆ ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನಲ್ಲಿ ಸನ್ಮಾನ

 ಗೋಣಿಕೊಪ್ಪಲಿನ ಕಾವೇರಿ ಕಾಲೇಜು ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎನ್.ಕೆ ಜ್ಯೋತಿ, ಚೆನ್ನಕೇಶವ ಮೂರ್ತಿ, ಬಿ.ಎಂ ಗಣೇಶ್ ಅವರನ್ನು ಸನ್ಮಾನಿಸಲಾಯಿತು.
ಗೋಣಿಕೊಪ್ಪಲಿನ ಕಾವೇರಿ ಕಾಲೇಜು ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎನ್.ಕೆ ಜ್ಯೋತಿ, ಚೆನ್ನಕೇಶವ ಮೂರ್ತಿ, ಬಿ.ಎಂ ಗಣೇಶ್ ಅವರನ್ನು ಸನ್ಮಾನಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಸೇವೆಯಿಂದ ನಿವೃತ್ತಿ
  • ಬೀಳ್ಕೊಡಲಾಯಿತು
ಪೊನ್ನಂಪೇಟೆ: ಸೇವೆಯಿಂದ ನಿವೃತ್ತಿ ಹೊಂದಲಿರುವ ವಿರಾಜಪೇಟೆ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲೆ ಎನ್.ಕೆ. ಜ್ಯೋತಿ, ಇತ್ತೀಚೆಗೆ ನಿವೃತ್ತರಾದ ಕುಶಾಲನಗರದ ಕನ್ನಡ ಭಾರತಿ ಪಿಯು ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಹಾಗೂ ಪ್ರಾಂಶುಪಾಲ ಚನ್ನಕೇಶವ ಮೂರ್ತಿ, ಗೋಣಿಕೊಪ್ಪಲು ಕಾಪ್ಸ್ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಹಾಗೂ ಎನ್‌ಸಿಸಿ ಅಧಿಕಾರಿ ಬಿ.ಎಂ.ಗಣೇಶ್ ಅವರನ್ನು ಬೀಳ್ಕೊಡಲಾಯಿತು.
ಪದವಿ ಪೂರ್ವ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದಿಂದ ಇತ್ತೀಚೆಗೆ ಗೋಣಿಕೊಪ್ಪಲಿನ ಕಾವೇರಿ ಕಾಲೇಜು ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಇದೇ ವೇಳೆ ಗೋಣಿಕೊಪ್ಪಲು ಕಾವೇರಿ ಪಿಯು ಕಾಲೇಜು ವತಿಯಿಂದ ಕಾಲೇಜಿನ ಹಳೇ ವಿದ್ಯಾರ್ಥಿಯೂ ಆದ ಪ್ರಾಂಶುಪಾಲೆ ಎನ್.ಕೆ. ಜ್ಯೋತಿ ಅವರನ್ನು ಸನ್ಮಾನಿಸಲಾಯಿತು.
ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್.ಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲು ಲಯನ್ಸ್ ಪಿ.ಯು ಕಾಲೇಜು ಪ್ರಾಂಶುಪಾಲೆ ಲತಾ, ಕಾಪ್ಸ್ ಪಿಯು ಕಾಲೇಜು ಪ್ರಾಂಶುಪಾಲ ರಾಮ ಚಂದ್ರನ್, ಶನಿವಾರಸಂತೆ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ಅಶೋಕ್, ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net