ಸಮಗ್ರ ಗಿರಿಜನ ಯೋಜನಾ ಇಲಾಖೆ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಮಾಹಿತಿ ನೀಡಿ, ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ವ್ಯಾಪ್ತಿಯಲ್ಲಿ 116, ಕಳತ್ಮಾಡು ಗ್ರಾಮ ವ್ಯಾಪ್ತಿಯಲ್ಲಿ 127, ಪೊನ್ನಂಪೇಟೆ ತಾಲೂಕಿನ ಬಾಳುಗೋಡು ಗ್ರಾಮ ವ್ಯಾಪ್ತಿಯಲ್ಲಿ 37, ಬಿರುನಾಣಿ ಗ್ರಾಮ ವ್ಯಾಪ್ತಿಯಲ್ಲಿ 621 ಹಾಗೂ ಕುರ್ಚಿ ಗ್ರಾಮ ವ್ಯಾಪ್ತಿಯಲ್ಲಿ 224 ಒಟ್ಟು 1,125 ಅರ್ಹ ಕುಟುಂಬಕ್ಕೆ ನಿವೇಶನ ಹಕ್ಕುಪತ್ರ ನೀಡಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.