ಸುಂಟಿಕೊಪ್ಪದಿಂದ ಮಾದಾಪುರ ಕಡೆಗೆ ತೆರಳುತ್ತಿದ್ದಾಗ ಇವರಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ಕೆಂಚಟ್ಟಿಯ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಅನಿಲ್‌ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್‌ರಾಜ್ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.