ಇದಕ್ಕೂ ಮೊದಲು ಮಾತನಾಡಿದ ಸಂಪಾಜೆ ಸ್ಥಳೀಯ ಸಂಸ್ಥೆ ಅಧ್ಯಕ್ಷ ಧನಂಜಯ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಎಲ್ಲಾ ಕಾರ್ಯಕ್ರಮ ಮಾಡಲು ಖಾಸಗಿ ಶಾಲೆಗಳನ್ನು ಅವಲಂಬಿಸಬೇಕಿದೆ. ಸ್ಥಳೀಯ ಸಂಸ್ಥೆಗಳಿAದ ಉತ್ತಮ ರ‍್ಯಾಲಿಗಳನ್ನು ನಡೆಸುತಿದ್ದೇವೆ ಮತ್ತು ರಕ್ತದಾನ ಶಿಬಿರ, ಪರಿಸರ ಸಂರಕ್ಷಣೆ ಜಾಥಾ, ವನಮಹೋತ್ಸವ, ಗೀತಗಾಯನ ಸ್ಫರ್ಧೆ, ದ್ವೀತಿಯ ಸೋಪಾನ ಪರೀಕ್ಷೆಯನ್ನು ಮಾಡುತ್ತಿದ್ದೇವೆ. 2023-2024ನೇ ಸಾಲಿನಲ್ಲಿ ಉತ್ತಮ ಸ್ಥಳಿಯ ಸಂಸ್ಥೆ ಎಂದು ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯರವರಿAದ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿದ್ದೇವೆ ಎಂದರು.