ಸಂಸ್ಕೃತಿ, ಪರಂಪರೆಯ ಪ್ರತೀಕ ಗ್ರಾಮೀಣ ಕ್ರೀಡೆ

ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಡಾ.ಮಂತರ್‌ಗೌಡ ಚಾಲನೆ ನೀಡಿದರು. ಮೇದಪ್ಪ, ತಮ್ಮಣಿ, ಗಿರೀಶ್, ಅರುಣ್, ಬಿದ್ದಪ್ಪ ಇದ್ದರು.
ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಡಾ.ಮಂತರ್‌ಗೌಡ ಚಾಲನೆ ನೀಡಿದರು. ಮೇದಪ್ಪ, ತಮ್ಮಣಿ, ಗಿರೀಶ್, ಅರುಣ್, ಬಿದ್ದಪ್ಪ ಇದ್ದರು.
Published on
ಸೋಮವಾರಪೇಟೆ: ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕಗಳಾಗಿವೆ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಯುವಕ ಸಂಘದ ವತಿಯಿಂದ ಜಾತ್ರೋತ್ಸವದ ಅಂಗವಾಗಿ ಶಾಂತಳ್ಳಿ ಶಾಲಾ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಈ ಹಿನ್ನೆಲೆಯಲ್ಲಿ ಯುವಕರು ಮುಂದೆ ಬಂದು ಇಂತಹ ಗ್ರಾಮೀಣ ಕ್ರೀಡಾಕೂಟಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ನಮ್ಮ ಹಳೆಯ ಕ್ರೀಡಾ ಪರಂಪರೆಯನ್ನು ಉಳಿಸಿ ಬೆಳೆಸಬೇಕು. ಗ್ರಾಮೀಣ ಕ್ರೀಡೆಗಳು ಕೇವಲ ಶಾರೀರಿಕ ಶಕ್ತಿಯ ಪರೀಕ್ಷೆಯಲ್ಲ ಗ್ರಾಮೀಣ ಜನರ ಒಗ್ಗಟ್ಟು, ಸಮಾನತೆಯ ಮೌಲ್ಯಗಳನ್ನು ಕಲಿಸುತ್ತವೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಂಡಿದ್ದರು.
ಬಹುಮಾನ ವಿತರಣೆ: ಜಿಲ್ಲೆ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಯುವಕ, ಯುವತಿಯರು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕಬಡ್ಡಿ, ವಾಲಿಬಾಲ್ ಮತ್ತು ಮಹಿಳಾ ವಿಭಾಗದ ಥ್ರೋಬಾಲ್ ವಿಜೇತರಿಗೆ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿಗಳನ್ನು ವಿತರಿಸಲಾಯಿತು.
ಯುವಕ ಸಂಘದ ಅಧ್ಯಕ್ಷ ಡಿ.ಎಚ್.ನಿತಿನ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ. ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಮಾಜಿ ಎಂಎಲ್‌ಸಿ ಎಸ್.ಜಿ.ಮೇದಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಬಿ.ಸತೀಶ್, ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಇ.ಜಯೇಂದ್ರ, ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ, ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ, ಯುವ ವೇದಿಕೆ ತಾಲೂಕು ಅಧ್ಯಕ್ಷ ಚಕ್ರವರ್ತಿ ಸುರೇಶ್, ಹಿರಿಯ ಕಬಡ್ಡಿ ಆಟಗಾರರಾದ ತಲ್ತಾರೆ ಬಿದ್ದಪ್ಪ, ಮಂಜೂರು ತಮ್ಮಣಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net