ಕಾರ್ಯಕ್ರಮದಲ್ಲಿ ಮಾತನಾಡಿದ ಬ್ರೆöÊನೋಬ್ರೆöÊನ್ ಅಂತಾರಾಷ್ಟಿçÃಯ ದುಬೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಹ್ಮಣ್ಯಂ ಅನ್ವಿತ್ ಸಾಧನೆಯನ್ನು ಶ್ಲಾಘಿಸಿದರು. ಮಾರ್ಗದರ್ಶಕಿ ಮಾಪಂಗಡ ಕವಿತಾ ಕರುಂಬಯ್ಯ ಮಾತನಾಡಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅನ್ವಿತ್, ರಾಷ್ಟçಮಟ್ಟ ಮತ್ತು ಅಂತಾರಾಷ್ಟಿçÃಯ ಮಟ್ಟದ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಹೆಮ್ಮೆ ಎನಿಸಿದೆ. ತಂದೆ ತಾಯಿಗಳ ಸಹಕಾರದಿಂದ ಅನ್ವಿತ್ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದು, ಅಂತಾರಾಷ್ಟಿçÃಯ ಮಟ್ಟದ ಯಶಸ್ಸು ಅವರ ಕುಟುಂಬದವರಿಗೆ ಸಲ್ಲಬೇಕು ಎಂದರು.