ಮಡಿಕೇರಿ: ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತ ವತಿಯಿಂದ ಸದ್ಭಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಪ್ರತಿಜ್ಞಾ ವಿಧಿಯನ್ನು ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಬೋಧಿಸಿದರು. ಅಲ್ಲದೇ ವೈಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ಆಗಲಿ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಪ್ರತಿಜ್ಞೆ ಮಾಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿ.ಎಚ್.ಸುಮಂಗಲ, ವಿಶೇಷ ಚೇತನರ ಅಧಿಕಾರಿ ವಿಮಲ, ಶಿರಸ್ತೇದಾರ್ ಮಹೇಶ್, ಷಣ್ಮುಖ, ಇತರರು ಇದ್ದರು.