ಶನಿವಾರಸಂತೆ: ಗ್ರಾಮ ಪಂಚಾಯಿತಿ ಸರ್ವಾಂಗೀಣ ಅಭಿವೃದ್ಧಿ ಜತೆಗೆ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಪಟ್ಟರು.
ಶನಿವಾರಸಂತೆ ಗ್ರಾಪಂ ವತಿಯಿಂದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಿಂದ ನಿರ್ಮಿಸಿರುವ ಭಾರತ್ ನಿರ್ಮಾಣ್ ಸೇವಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಿರ್ಮಿಸಿರುವ ವಾಲಿಬಾಲ್ ಅಂಕಣ ಉದ್ಘಾಟಿಸಿ ಮಾತನಾಡಿದರು. ಗ್ರಾಪಂಗಳು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಗ್ರಾಪಂ ಸದಸ್ಯರು ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ರಹಿತವಾಗಿ ಕೈಜೋಡಿಸಬೇಕು ಎಂದ ಅವರು, ಗ್ರಾಪಂನಿಂದ ಸರ್ಕಾರದ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಶಾಲೆಯ ಆವರಣದಲ್ಲಿ ವಾಲಿಬಾಲ್ ಅಂಕಣವನ್ನು ನಿರ್ಮಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.