ಸುಂಟಿಕೊಪ್ಪ: ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾಭಿವೃದ್ಧಿ ಸಮಿತಿಯ ಗೌರವಧ್ಯಕ್ಷ ರಫೀಕ್ ಖಾನ್ ಅವರು ಗಿಡ ನೆಟ್ಟರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಿಸರ್ಗ ಇಕೋ ಕ್ಲಬ್ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಶಾಲಾವರಣದಲ್ಲಿ ಗಿಡವನ್ನು ನೆಡಲಾಯಿತು. ಶಾಲಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ರಫೀಕ್‌ಖಾನ್ ಮಾತನಾಡಿ, ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸುವ ದಿಸೆಯಲ್ಲಿ ನಾವು ಇಂದಿನಿಂದಲೇ ಮರ, ಗಿಡಗಳನ್ನು ಬೆಳೆಸುವುದರೊಂದಿಗೆ ಪರಿಸರ ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಪಿ.ಇ.ನಂದ, ಸತೀಶ್, ಚಂದ್ರವತಿ, ಉಷಾ, ವನಿತಾ, ಇಂದಿರಾ, ಹಸೀನಾ, ಮಮತಾ ಜಸೀಲಾ ಇದ್ದರು.