ಮಾದಕ ವಸ್ತುಗಳ ಬಳಸದಂತೆ ಶಾಲಾ ಮಕ್ಕಳಿಂದ ಜಾಗೃತಿ

ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧದ ಅಂತರಾಷ್ಟ್ರೀಯ ದಿನದ ಅಂಗವಾಗಿ ಸಿದ್ದಾಪುರದಲ್ಲಿ ಶನಿವಾರ ಆಯೋಜಿಸಿದ್ದ ಜಾಗೃತಿ ಅಭಿಯಾನದಲ್ಲಿ ಎಎಸ್‌ಐ ರಾಜು, ಪ್ರಮಿಳಾ, ರಜಾಕ್, ಶಾಲಾ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಇದ್ದರು.
ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧದ ಅಂತರಾಷ್ಟ್ರೀಯ ದಿನದ ಅಂಗವಾಗಿ ಸಿದ್ದಾಪುರದಲ್ಲಿ ಶನಿವಾರ ಆಯೋಜಿಸಿದ್ದ ಜಾಗೃತಿ ಅಭಿಯಾನದಲ್ಲಿ ಎಎಸ್‌ಐ ರಾಜು, ಪ್ರಮಿಳಾ, ರಜಾಕ್, ಶಾಲಾ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಇದ್ದರು.
Published on
ಸಿದ್ದಾಪುರ: ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧದ ಅಂತರಾಷ್ಟ್ರೀಯ ದಿನದ ಅಂಗವಾಗಿ ಸಿದ್ದಾಪುರದಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಸಿದ್ದಾಪುರ ಪೊಲೀಸ್ ಠಾಣೆ, ಇಕ್ರಾ ಪಬ್ಲಿಕ್ ಶಾಲೆ ಹಾಗೂ ಸಂತ ಅನ್ನಮ್ಮ ಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಶೆಮುಕ್ತ ಭಾರತ ಘೋಷವಾಕ್ಯದಡಿ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಜಾಗೃತಿ ಅಭಿಯಾನದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ, ಸಾಮಾಜಿಕ ಮತ್ತು ಕಾನೂನು ಸಂಬಂಧಿತ ಸಮಸ್ಯೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುವ ಮೂಲಕ ಮಾದಕ ವಸ್ತುಗಳ ವಿರುದ್ಧ ಹೋರಾಡುವ ಸಂದೇಶ ಸಾರಿದರು.
ಸಿದ್ದಾಪುರ ಠಾಣೆ ಎಎಸ್‌ಐ ರಾಜು ಮಾತನಾಡಿ, ಯುವಜನರು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಂತ ಅನ್ನಮ್ಮ ಶಾಲೆಯ ಪ್ರಮಿಳಾ, ಇಕ್ರಾ ಪಬ್ಲಿಕ್ ಶಾಲೆಯ ರಜಾಕ್, ಸ್ಥಳೀಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net