ಸರ್ಕಾರಿ ಶಾಲೆಗಳಲ್ಲಿ ಮನೆ ಮಾಡಿದ ಸಂಭ್ರಮ

ಮಾಲ್ದಾರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಡಗರ.
ಮಾಲ್ದಾರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಡಗರ.
Published on
ಸಿದ್ದಾಪುರ: ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸಿದ್ದಾಪುರ, ಮಾಲ್ದಾರೆ, ಅಮ್ಮತ್ತಿ, ಚೆನ್ನಯ್ಯನ ಕೋಟೆ, ನೆಲ್ಯಹುದಿಕೇರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ಸಂಭ್ರಮ ಮನೆಮಾಡಿತ್ತು.
ಬೇಸಿಗೆ ರಜೆಯ ಬಳಿಕ ಶಾಲೆಗಳಿಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು, ಶಾಲಾ ಸಿಬ್ಬಂದಿ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಸದಸ್ಯರು ಹಾಗೂ ಪಾಲಕರು ಆತ್ಮೀಯವಾಗಿ ಸ್ವಾಗತಿಸಿದರು. ಶಾಲಾ ಆವರಣಗಳನ್ನು ಸಿಂಗಾರಗೊಳಿಸಿ, ವಿದ್ಯಾರ್ಥಿಗಳಿಗೆ ಹೂವು ಹಾಗೂ ಸಿಹಿ ನೀಡಿ ಬರಮಾಡಿಕೊಳ್ಳಲಾಯಿತು.
ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಶೈಕ್ಷಣಿಕ ಸಾಮಗ್ರಿ ವಿತರಿಸಲಾಯಿತು. ಶಿಕ್ಷಕರು ಮಕ್ಕಳಿಗೆ ಹೊಸ ಶೈಕ್ಷಣಿಕ ವರ್ಷದ ಮಹತ್ವ, ನಿಯಮಿತ ಹಾಜರಾತಿ, ಸ್ವಚ್ಛತೆ, ಶಿಸ್ತು ಹಾಗೂ ಉತ್ತಮ ಅಧ್ಯಯನದ ಕುರಿತು ಮಾರ್ಗದರ್ಶನ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ ಮೊಳಗಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಮತ್ತು ಕಲಿಕೆಯ ಉತ್ಸಾಹ ಕಂಡುಬಂತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net