ಸೋಮವಾರಪೇಟೆ: ತಾಲೂಕಿನ ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ 2026-27ನೇ ಸಾಲಿನ ಶಾಲಾ ಸಂಸತ್ ಚುನಾವಣೆ ನಡೆಸಲಾಯಿತು.
ಈ ಪ್ರಕ್ರಿಯೆಯಲ್ಲಿ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಂತರ ಚುನಾವಣೆ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು.
ಶಾಲೆಯ ಮುಖ್ಯ ಶಿಕ್ಷಕ ಎಂ.ಎಂ.ಯಶ್ವಂತ್ ಕುಮಾರ್ ಮಾತನಾಡಿ, ವಿದ್ಯಾರ್ಥಿ ದಿಸೆಯಿಂದಲೇ ಈ ರೀತಿಯ ಚುನಾವಣೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಚುನಾವಣೆಯ ವಿವಿಧ ಹಂತಗಳ ಪರಿಚಯವಾಗುವುದಲ್ಲದೆ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ವಿಧಾನವನ್ನು ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಸಹ ಶಿಕ್ಷಕರಾದ ಎಸ್.ಎಸ್.ರಂಜಿನಿ, ರೇಖಾ, ಶೋಭ, ಗುಲಾಬಿ, ಸಿಬ್ಬಂದಿ ದಿನೇಶ್ ಇದ್ದರು.