ಶಾಲಾ ಕೊಠಡಿ ಕುಸಿತ

ಕಾರುಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಸಂಪೂರ್ಣ ಕುಸಿದಿರುವುದು.
ಕಾರುಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಸಂಪೂರ್ಣ ಕುಸಿದಿರುವುದು.
Published on

: ಧಾರಾಕಾರ ಮಳೆಯಿಂದಾಗಿ ಕಾರುಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೊಠಡಿ ಸಂಪೂರ್ಣ ಕುಸಿದಿದೆ.

ಭಾನುವಾರ ರಜಾ ದಿನವಾಗಿದ್ದರಿಂದ ಕಟ್ಟಡ ಕುಸಿಯುವ ಸಂದರ್ಭ ಶಾಲೆಯಲ್ಲಿ ಮಕ್ಕಳು ಯಾರೂ ಇರಲಿಲ್ಲ. ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. ಸೋಮವಾರ ಸ್ಥಳಕ್ಕೆ ಗ್ರಾಪಂ ಇಂಜಿನಿಯರ್, ಪಿಡಿಒ, ಎಸ್‌ಡಿಎಂಸಿ ಸದಸ್ಯರು, ಶಾಲಾ ಮುಖ್ಯಶಿಕ್ಷಕರು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಹಾನಿಗೊಂಡ ಶಾಲಾ ಕೊಠಡಿ ಪರಿಶೀಲಿಸಿ ಮಾಹಿತಿ ಪಡೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net