ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು

ಸಿದ್ದಾಪುರ: ಪೊನ್ನಂಪೇಟೆ ತಾಲೂಕಿನ ಚಿಕ್ಕಮಂಡೂರು ಗ್ರಾಮದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ನೀರಿಗೆ ಇಳಿದ ತಂದೆ ಸೇರಿ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಸಿದ್ದಾಪುರ: ಪೊನ್ನಂಪೇಟೆ ತಾಲೂಕಿನ ಚಿಕ್ಕಮಂಡೂರು ಗ್ರಾಮದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ನೀರಿಗೆ ಇಳಿದ ತಂದೆ ಸೇರಿ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
Published on

ಪ್ರಮುಖ ಮುಖ್ಯಾಂಶಗಳು

  • Schoolboy dies
ಸಿದ್ದಾಪುರ: ಪೊನ್ನಂಪೇಟೆ ತಾಲೂಕಿನ ಚಿಕ್ಕಮಂಡೂರು ಗ್ರಾಮದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ನೀರಿಗೆ ಇಳಿದ ತಂದೆ ಸೇರಿ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದ 2ನೇ ತರಗತಿ ವಿದ್ಯಾರ್ಥಿ ಜೆ.ಕೆ.ಕೆಂಚ (8), ಆತನ ತಂದೆ ಜೇನುಕುರುಬರ ಶಿವಣ್ಣ (40) ಮೃತರು. ಚಿಕ್ಕಮಂಡೂರು ಗ್ರಾಮದ ಜಾಲಿ ಪೂವಯ್ಯ ಅವರ ಲೈನ್‌ಮನೆಯಲ್ಲಿ ಕುಟುಂಬ ಸಮೇತ ವಾಸವಾಗಿದ್ದ ಶಿವಣ್ಣ ಮಾ. 8ರಂದು ಭಾನುವಾರ ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಕುಟುಂಬದವರೊಂದಿಗೆ ಗ್ರಾಮದ ಕೆರೆಯ ಬಳಿ ತೆರಳಿದ್ದರು. ಕೆರೆಯ ಬಳಿಯಲ್ಲಿ ಸ್ನಾನ ಮಾಡಿ ಆಟವಾಡುತ್ತಿದ್ದ ವೇಳೆ ಬಾಲಕ ಕೆಂಚ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾನೆ.
ತಕ್ಷಣ ಶಿವಣ್ಣ, ಮಗನನ್ನು ರಕ್ಷಿಸಲು ನೀರಿಗೆ ಇಳಿದಿದ್ದಾರೆ. ಆದರೆ ಕೆರೆಯಲ್ಲಿ ಹೂಳು ತುಂಬಿಕೊಂಡಿದ್ದರಿಂದ ಇಬ್ಬರೂ ನೀರಿನಿಂದ ಹೊರಬರಲಾಗದೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ತಂದೆಯ ಮೃತದೇಹವನ್ನು ಮಾ.8ರಂದು ಸಂಜೆ ಕೆರೆಯಿಂದ ಹೊರತೆಗೆದರೆ, ಬಾಲಕನ ಮೃತದೇಹವನ್ನು ಮಾ. 9ರಂದು ಬೆಳಗ್ಗೆ ಹೊರತೆಗೆಯಲಾಗಿದೆ.
ಈ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟ್ಟ ವೃತ್ತ ನಿರೀಕ್ಷಕ ಶಿವರುದ್ರಪ್ಪ ಹಾಗೂ ಶ್ರೀಮಂಗಲ ಠಾಣಾಧಿಕಾರಿ ರವೀಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಶಿವಣ್ಣ ಪತ್ನಿ ಸುಮತಿ ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಮಾ.9ರಂದು ಅಂತ್ಯಕ್ರಿಯೆ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net