ಸಹಾಯ ಧನ, ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ

 ಹೊಟೇಲ್ ಕಾರ್ಮಿಕರಿಗೆ ಸಹಾಯ ಧನ ನೀಡಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಘಟಕ ವತಿಯಿಂದ ಆರ್.ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಅಬ್ದುಲ್ ರಜಾಕ್, ಅಜೀಜ್, ಅಲ್ತಾಫ್ ಇತರರಿದ್ದರು.
ಹೊಟೇಲ್ ಕಾರ್ಮಿಕರಿಗೆ ಸಹಾಯ ಧನ ನೀಡಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಘಟಕ ವತಿಯಿಂದ ಆರ್.ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಅಬ್ದುಲ್ ರಜಾಕ್, ಅಜೀಜ್, ಅಲ್ತಾಫ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಹಾಯ ಧನ, ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ
ಮಡಿಕೇರಿ: ಮಧ್ಯ ಪ್ರಾಚ್ಯ ಯುದ್ಧದ ಕಾರಣದಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಹೊಟೇಲ್ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸರ್ಕಾರ ಹೊಟೇಲ್ ಕಾರ್ಮಿಕರಿಗೆ ಸಹಾಯ ಧನ ನೀಡಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಘಟಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ನ ಲಭ್ಯತೆ ಕಡಿಮೆ ಇರುವುದರಿಂದ ಕೊಡಗು ಜಿಲ್ಲೆಯಲ್ಲೂ ಹೊಟೇಲ್ ಮಾಲೀಕರು ಕಾರ್ಯವನ್ನು ಸ್ಥಗಿತಗೊಳಿಸಿದ್ದು, ಹೊಟೇಲ್ ಕಾರ್ಮಿಕರು ಕಷ್ಟ ಎದುರಿಸುತ್ತಿದ್ದಾರೆ. ಹೊಟೇಲ್ ಕೆಲಸವನ್ನೇ ನಂಬಿ ಬದುಕು ಸಾಗಿಸುತ್ತಿದ್ದ ಬಡ ಕಾರ್ಮಿರಿಗೆ ಪರ್ಯಾಯ ಮಾರ್ಗವಿಲ್ಲದೆ ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿರುವ ಸಾವಿರಾರು ಸಂಖ್ಯೆಯ ಹೊಟೇಲ್ ಕಾರ್ಮಿಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಸರಕಾರ ತಕ್ಷಣ ಎಚ್ಚೆತ್ತುಕೊಂಡು ಕಾರ್ಮಿಕರ ಜೀವನೋಪಾಯಕ್ಕೆ ಪರ್ಯಾಯ ಮಾರ್ಗ ಸೂಚಿಸಬೇಕು ಮತ್ತು ಸಹಾಯ ಧನ ವಿತರಿಸಬೇಕು ಎಂದು ಎಸ್‌ಡಿಟಿಯು ನ ಜಿಲ್ಲಾ ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್ ಒತ್ತಾಯಿಸಿದರು.
ಕಳೆದ ಹಲವಾರು ವರ್ಷಗಳಿಂದ ತೋಟದ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಅರ್ಹ ಫಲಾನಿಭವಿಗಳಿಗೆ ಸರಕಾರದ ವತಿಯಿಂದ ಆಶ್ರಯ, ಅಂಬೇಡ್ಕರ್ ವಸತಿ ಯೋಜನೆ ಮತ್ತು ಪಿಎಂ ಆವಾಜ್‌ ವಸತಿ ಯೋಜನೆಯಡಿ ಮನೆಗಳನ್ನು ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸುವ ಸಂದರ್ಭ ಎಸ್‌ಡಿಟಿಯುನ ಜಿಲ್ಲಾ ಸಮಿತಿ ಸದಸ್ಯರಾದ ಸಿ.ಎ.ಅಜೀಜ್, ಕೆ.ಎಂ.ಅಲ್ತಾಫ್, ಸಾಜಿದ್ ಖಾನ್ ಮತ್ತಿತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net