ಸೀಮಂತ, ಅಕ್ಷರಾಭ್ಯಾಸ, ಅನ್ನಪ್ರಾಶನ ಕಾರ್ಯಕ್ರಮ

ಸೀಮಂತ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿರುವ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾವನ ಗಗನ್. ಬೆಂಬಳೂರು ಹಿರಿಯ ಅಂಗನವಾಡಿ ಕಾರ್ಯಕರ್ತೆ ವನಜಾಕ್ಷಿ, ದೊಡ್ಡಾಕುಂದ ಅಂಗನವಾಡಿ ಕಾರ್ಯಕರ್ತೆ ನಿರ್ಮಲ, ಊರುಗುತ್ತಿ ಅಂಗನವಾಡಿ ಕಾರ್ಯಕರ್ತೆ ಶೋಭಾ, ಶಿರಹ ಅಂಗನವಾಡಿ ಕಾರ್ಯಕರ್ತೆ ವನಿತಾ, ಕ್ಯಾತೆ ಅಂಗನವಾಡಿ ಕಾರ್ಯಕರ್ತೆ ವಿಮಲಾ, ಶಿವರಳ್ಳಿ ಅಂಗನವಾಡಿ ಕಾರ್ಯಕರ್ತೆರಾಣಿ, ಬ್ಯಾಡಗೊಟ್ಟ ಅಂಗನವಾಡಿ ಕಾರ್ಯಕರ್ತೆ ಪವಿತ್ರಾ ಇತರರು ಇದ್ದರು.
ಸೀಮಂತ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿರುವ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾವನ ಗಗನ್. ಬೆಂಬಳೂರು ಹಿರಿಯ ಅಂಗನವಾಡಿ ಕಾರ್ಯಕರ್ತೆ ವನಜಾಕ್ಷಿ, ದೊಡ್ಡಾಕುಂದ ಅಂಗನವಾಡಿ ಕಾರ್ಯಕರ್ತೆ ನಿರ್ಮಲ, ಊರುಗುತ್ತಿ ಅಂಗನವಾಡಿ ಕಾರ್ಯಕರ್ತೆ ಶೋಭಾ, ಶಿರಹ ಅಂಗನವಾಡಿ ಕಾರ್ಯಕರ್ತೆ ವನಿತಾ, ಕ್ಯಾತೆ ಅಂಗನವಾಡಿ ಕಾರ್ಯಕರ್ತೆ ವಿಮಲಾ, ಶಿವರಳ್ಳಿ ಅಂಗನವಾಡಿ ಕಾರ್ಯಕರ್ತೆರಾಣಿ, ಬ್ಯಾಡಗೊಟ್ಟ ಅಂಗನವಾಡಿ ಕಾರ್ಯಕರ್ತೆ ಪವಿತ್ರಾ ಇತರರು ಇದ್ದರು.
Published on
ಶನಿವಾರಸಂತೆ: ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸೋಮವಾರಪೇಟೆ ತಾಲೂಕು ಹಾಗೂ ಬ್ಯಾಡಗೊಟ್ಟ ಪಂಚಾಯಿತಿ ವ್ಯಾಪ್ತಿಯ ಏಳು ಅಂಗನವಾಡಿಗಳ ಸಹಯೋಗದಲ್ಲಿ ದೊಡ್ಡಾಕುಂದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಪೋಷಣಾ ಅಭಿಯಾನ ಹಾಗೂ ಸೀಮಂತ, ಅಕ್ಷರಾಭ್ಯಾಸ, ಅನ್ನಪ್ರಾಸನ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು.
ಅಂಗನವಾಡಿ ಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾವನ ಗಗನ್ ಉದ್ಘಾಟಿಸಿ ಮಾತನಾಡಿ, ತಾಯ್ತನ ಹೆಣ್ಣಿಗೊಲಿದ ಒಂದು ಅದೃಷ್ಟ. ಈ ಅದೃಷ್ಟವನ್ನು ಸಂಭ್ರಮಿಸುವುದೇ ಸೀಮಂತ ಕಾರ್ಯ, ಸೀಮಂತವೆಂದರೆ ಕೇವಲ ಸಂಭ್ರಮಾಚರಣೆಯಲ್ಲ. ಇದೊಂದು ಸಂಸ್ಕಾರ, ಗರ್ಭವತಿಯಾದ ಹೆಣ್ಣುಮಗಳು ಮತ್ತು ಆಕೆಯ ಕರುಳಕುಡಿಗೆ ಸರ್ವವೂ ಶುಭವಾಗಲಿ ಎಂದು ಹರಸುವ ಸಂಪ್ರದಾಯಬದ್ಧ ಶಾಸ್ತ್ರವಾಗಿದೆ ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವನಿತಾ ಮಾತನಾಡಿ, ಮಹಿಳೆಯರು ಗರ್ಭ ಧರಿಸಿದ ಮೊದಲ ತಿಂಗಳಲ್ಲಿಯೇ ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತರ ಮೂಲಕ ತಾಯಿ ಕಾರ್ಡ್ ಮಾಡಿಸಿ ಪ್ರತಿ ತಿಂಗಳು ವೈದ್ಯರ ಸಲಹೆ ಪಡೆದು ತಮ್ಮ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಬೆಂಬಳೂರು ಹಿರಿಯ ಅಂಗನವಾಡಿ ಕಾರ್ಯಕರ್ತೆ ವನಜಾಕ್ಷಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಿಬಿಇ ಎಂಬ ಕಾರ್ಯಕ್ರಮ ಅಡಿಯಲ್ಲಿ ಸೀಮಂತ, ಅಕ್ಷರಾಭ್ಯಾಸ, ಅನ್ನ ಪ್ರಾಸನವನ್ನು ಗರ್ಭಿಣಿಯರು ಹಾಗೂ ಮಕ್ಕಳಿಗೆ ಏರ್ಪಡಿಸಲಾಗಿದೆ. ಜತೆಗೆ ಅಂಗನವಾಡಿ ಕೇಂದ್ರದಿಂದ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕಾಹಾರ ವಿತರಣೆ ಮಾಡಲಾಗುತ್ತಿದೆ. ಮಹಿಳೆಯರು ಗುಣಮಟ್ಟದ ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವ ಮೂಲಕ ಮಗುವಿನ ಆರೋಗ್ಯದ ಜತೆಗೆ ನಿಮ್ಮ ಆರೋಗ್ಯದ ಸುಧಾರಣೆಗೂ ಒತ್ತು ನೀಡಬೇಕು ಎಂದರು.
ಈ ಸಂದರ್ಭ ಗ್ರಾಮದ ಮುಖಂಡರಾದ ಸತ್ಯ, ದೊಡ್ಡಾಕುಂದ ಅಂಗನವಾಡಿ ಕಾರ್ಯಕರ್ತೆ ನಿರ್ಮಲಾ, ಊರುಗುತ್ತಿ ಅಂಗನವಾಡಿ ಕಾರ್ಯಕರ್ತೆ ಶೋಭಾ, ಶಿರಹ ಅಂಗನವಾಡಿ ಕಾರ್ಯಕರ್ತೆ ವನಿತಾ, ಕ್ಯಾತೆ ಅಂಗನವಾಡಿ ಕಾರ್ಯಕರ್ತೆ ವಿಮಲಾ, ಶಿವರಳ್ಳಿ ಅಂಗನವಾಡಿ ಕಾರ್ಯಕರ್ತೆ ರಾಣಿ, ಬ್ಯಾಡಗೊಟ್ಟ ಅಂಗನವಾಡಿ ಕಾರ್ಯಕರ್ತೆ ಪವಿತ್ರಾ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ನಂತರ ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ ನೆರವೇರಿಸುವ ಮೂಲಕ ಶುಭ ಹಾರೈಸಿದರು. ಇದೇ ವೇಳೆ ಅಂಗನವಾಡಿ ಕಾರ್ಯಕರ್ಎಯರು, ಅತಿಥಿಗಳು ಹಾಗೂ ಪಾಲಕರು ಮಕ್ಕಳಿಂದ ಅಕ್ಕಿಯ ತಟ್ಟೆಯಲ್ಲಿ ಓಂ ಎಂದು ಬರೆಸುವ ಮೂಲಕ ಅಕ್ಷರಾಭ್ಯಾಸ ಮಾಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net