ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆ

ಖೋ ಖೋ ಪಂದ್ಯಾವಳಿಯಲ್ಲಿ ಮಾಲ್ದಾರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ  ಬಾಲಕ ತಂಡ ಪ್ರಥಮ ಸ್ಥಾನ ಪಡೆಯಿತು.
ಖೋ ಖೋ ಪಂದ್ಯಾವಳಿಯಲ್ಲಿ ಮಾಲ್ದಾರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ತಂಡ ಪ್ರಥಮ ಸ್ಥಾನ ಪಡೆಯಿತು.
Published on
ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಬೆಕ್ಕೆ ಸಡ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ಖೋ ಖೋ ಪಂದ್ಯದಲ್ಲಿ ಮಾಲ್ದಾರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಕ್ಕೆ ಆಯ್ಕೆಗಿದ್ದಾರೆ.
ತಾಲೂಕಿನ ವಿವಿಧ ಶಾಲೆಗಳ ತಂಡಗಳು ಭಾಗವಹಿಸಿದ್ದ ಪಂದ್ಯಾವಳಿಯಲ್ಲಿ ಮಾಲ್ದಾರೆ ಶಾಲೆಯ ವಿದ್ಯಾರ್ಥಿಗಳು ಉತ್ತಮ ಕ್ರೀಡಾ ಪ್ರದರ್ಶನ ನೀಡಿ ಗಮನ ಸೆಳೆದರು.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಎಸ್‌ಡಿಎಂಸಿ ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದು, ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net