ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರೋಟರಿಯ ಸಹಾಯಕ ಗವರ್ನರ್ ದಿಲನ್ ಚಂಗಪ್ಪ ಅವರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹೆಚ್ಚಿಸುವ ಕುರಿತು ಮಾಹಿತಿ ನೀಡಿದರು. ಝೋನಲ್ ಲೆಫ್ಟಿನೆಂಟ್ ರೋಟರಿಯನ್ ಕೆ.ಸಿ.ಕಾರ್ಯಪ್ಪ, ರೋಟರಿ ಮಡಿಕೇರಿ ಅಧ್ಯಕ್ಷ ಲಲಿತ ರಾಘವನ್ ಹಾಗೂ ಕಾರ್ಯದರ್ಶಿ ಬಿ.ಎಂ.ಸೋಮಣ್ಣ ಉಪಸ್ಥಿತರಿದ್ದರು.