ಇಲ್ಲಿಯ ಚೆರಿಯಪರಂಬು ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಣ್ಣಿನ ಗಿಡಗಳನ್ನು ನೆಟ್ಟು, ಶ್ರಮದಾನ ಮಾಡಿದರು. ಬಳಿಕ ಪರಿಸರ ದಿನಾಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಉಮಾಲಕ್ಷ್ಮೀ, ರಮ್ಯಾ, ಶಂಕರ, ದಿಲೀಶ್, ಮಾಯಿಲಪ್ಪ, ಶರವಣ, ಆನಂದ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.