ಮಾಮಹೇಶ್ವರ ದೇಗುಲದಲ್ಲಿ ಶಿವರಾತ್ರಿ ಪೂಜೆ

ಕುಶಾಲನಗರ ಸಮೀಪದ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಸಮಿತಿಯಿಂದ ಮಹಾಶಿವರಾತ್ರಿ ಅಂಗವಾಗಿ ವಿವಿಧ ಪೂಜಾ ಕೈಂಕರ್ಯ ನೆರವೇರಿತು.
ಕುಶಾಲನಗರ ಸಮೀಪದ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಸಮಿತಿಯಿಂದ ಮಹಾಶಿವರಾತ್ರಿ ಅಂಗವಾಗಿ ವಿವಿಧ ಪೂಜಾ ಕೈಂಕರ್ಯ ನೆರವೇರಿತು.
Published on
ಕುಶಾಲನಗರ: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಸಮಿತಿಯಿಂದ ಭಾನುವಾರ ಮಹಾಶಿವರಾತ್ರಿ ಅಂಗವಾಗಿ ವಿವಿಧ ಪೂಜಾ ಕೈಂಕರ್ಯ ನೆರವೇರಿದವು.
ದೇವಾಲಯದ ಆವರಣದಲ್ಲಿ ಬೆಳಗ್ಗೆ ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ, ರುದ್ರಹೋಮ, ಶ್ರೀ ಸ್ವಾಮಿಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯವನ್ನುಕೇರಳ ಸಿಹಿಕುಮಾರ್ ನೇತ್ರತ್ವದ ತಂಡದವರು ನೆರವೇರಿಸಿದರು.
ಸಂಜೆ 6 ಗಂಟೆಗೆ ಉಮಾಮಹೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿದ್ಯುತ್ ದೀಪಗಳಿಂದ ಅಲಂಕೃತವಾದ ಭವ್ಯ ಮಂಟಪದಲ್ಲಿರಿಸಿ ಹುದುಗೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಭಕ್ತರಿಗೆ ದೇವಾಲಯ ಸಮಿತಿ ವತಿಯಿಂದ ಅನ್ನಸಂರ್ತಪಣೆ ಮಾಡಲಾಯಿತು.
ಕೂಡಿಗೆ, ಕೂಡುಮಗಳೂರು, ಕುಶಾಲನಗರ, ಹಾರಂಗಿ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ದೇವಾಲಯ ಸಮಿತಿ ಅಧ್ಯಕ್ಷ ಟಿ.ಎಂ.ಚಾಮಿ, ಉಪಾಧ್ಯಕ್ಷ ಎನ್.ಎಸ್.ಮುತ್ತಪ್ಪ, ಕಾರ್ಯದರ್ಶಿ ಬಿ.ಎಲ್.ಸುರೇಶ್ ಸೇರಿದಂತೆ ಸಮಿತಿಯ ನಿರ್ದೇಶಕರು, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net