ಶ್ರೀ ಶನೈಶ್ಚರ ದೇಗುಲದಲ್ಲಿ ಶ್ರಾವಣ ಮಾಸದ ಪೂಜೆ

ಮಗ್ಗುಲ ಶನೈಶ್ಚರ ದೇವಾಲಯ.
ಮಗ್ಗುಲ ಶನೈಶ್ಚರ ದೇವಾಲಯ.
Published on

ವಿರಾಜಪೇಟೆ : ತಾಲೂಕಿನ ಮಗ್ಗುಲ ಗ್ರಾಮದಲ್ಲಿರುವ ಶ್ರೀ ಶನೈಶ್ಚರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಮಾಸದ ಅಂಗವಾಗಿ ಶ್ರಾವಣ ಶನಿವಾರದ ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳು ಆಯೋಜಿಸಲಾಗಿದೆ.

ಶ್ರಾವಣ ಮಾಸದ ಒಟ್ಟು 4 ಶನಿವಾರಗಳಂದು ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮಗಳು ನೆರವೇರಲಿವೆ. ಆ.15ರ 1ನೇ ಶನಿವಾರ ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮದೊಂದಿಗೆ ಶ್ರಾವಣ ಮಾಸದ ಪೂಜಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಆ.22ರ ಎರಡನೇ ಶನಿವಾರ, ಆ.29ರ 3ನೇ ಶನಿವಾರ, ಸೆ.5ರ 4ನೇ ಶನಿವಾರ ವಿಶೇಷ ಪೂಜಾ ಕೈಂಕರ್ಯ ನೆರವೇರಲಿದೆ.
ಶ್ರಾವಣ ಶನಿವಾರಗಳಂದು ದೇವಾಲಯದಲ್ಲಿ ನವಗ್ರಹ ಪೂಜೆ, ಶನಿ ಶಾಂತಿ ಪೂಜೆ, ಶನಿಜಪ ಹಾಗೂ ವಿವಿಧ ವಿಶೇಷ ಪೂಜೆ ಆಯೋಜಿಸಲಾಗಿದೆ. ಪ್ರತಿ ಶನಿವಾರ ಮಧ್ಯಾಹ್ನ 1 ಗಂಟೆಗೆ ನಾಡಿನ ಕ್ಷೇಮಕ್ಕಾಗಿ ಮಹಾಪೂಜೆ ನಡೆಯಲಿದ್ದು, ತದನಂತರ ಮಧ್ಯಾಹ್ನ 1.30ಕ್ಕೆ ಭಕ್ತಾರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯದ ಆಡಳಿತ ಮಂಡಳಿ ಮುಖ್ಯಸ್ಥ ಚೋಕಂಡ ರಮೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net