ಸಿದ್ದಾಪುರ:ಅಪ್ರಾಪ್ತಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆಟೋ ಚಾಲಕನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.
ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಚಾಲಕ ಆಕೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಈ ಸಂಬಂಧ ದೂರು ದಾಖಲಾದ ಬಳಿಕ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಸಿದ್ದಾಪುರದ ಪಾಲಿಬೆಟ್ಟ ರಸ್ತೆ ನಿವಾಸಿ ಕೆ.ಎಂ.ಅನ್ಸಾರ್ (34) ಎಂದು ಗುರುತಿಸಲಾಗಿದೆ. ಪೊಲೀಸರು ಆರೋಪಿಯ ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.
ಇದಲ್ಲದೆ, ಆರೋಪಿಯ ವಿರುದ್ಧ ಈ ಹಿಂದೆಯೂ ಹಲವು ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.