ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಏ.೧ ರಿಂದ ೧೫ ರವರೆಗೆ ಮನೆ ಮನೆ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆಯನ್ನು ಸ್ವಯಂ ದಾಖಲಿಸುವಂತಾಗಬೇಕು. ಹಾಗೆಯೇ, ಏ.೧೬ ರಿಂದ ಮನೆ ಮನೆ ಸಮೀಕ್ಷೆ ಕಾರ್ಯ ನಡೆಯಲಿದ್ದು, ಗಣತಿದಾರರು ಮನೆಗೆ ಭೇಟಿ ನೀಡಲಿದ್ದಾರೆ. ಎಲ್ಲಾ ಮಾಜಿ ಸೈನಿಕರು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡು ಸಮೀಕ್ಷೆ ಕಾರ್ಯದಲ್ಲಿ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳುವಂತೆ ಅವರು ಆರ್.ಐಶ್ವರ್ಯ ಕೋರಿದರು.