ಸೋಮವಾರಪೇಟೆ: ಕಾರ್ಮಿಕ ಇಲಾಖೆಯಿಂದ ಕೊಡಗು ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರಿಗಾಗಿ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ತರಬೇತಿ ಕಾರ್ಯಾಗಾರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾ.15 ರಿಂದ 17ರವರೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಕೆಲಸದ ಸ್ಥಳಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸುರಕ್ಷತಾ ನಿಯಮಗಳ ಬಗ್ಗೆ ತರಬೇತುದಾರರಾದ ಕಾರ್ತಿಕ್, ದರ್ಶನ್ ಮತ್ತು ಪ್ರದೀಪ್ ಮಾಹಿತಿ ನೀಡಿದರು.
ಜತೆಗೆ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ನಡೆಯಿತು. ಈ ಸಂದರ್ಭದಲ್ಲಿ ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಯಿತು.
ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಸ್.ಶಶಿಧರ್ ಮಾತನಾಡಿ, ನೈಜ ಅರ್ಹ ಕಟ್ಟಡ ಕಾರ್ಮಿಕರು ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು ಮಂಡಳಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ ಹಿರಿಯ ಅಧಿಕಾರಿ ಪ್ರಸನ್ನ, ಕಚೇರಿ ಸಿಬ್ಬಂದಿ ಇದ್ದರು.