ಸಬ್ಬಮ್ಮದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಯೋಜಿಸಿದ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು.
ಸೋಮವಾರಪೇಟೆ ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಯೋಜಿಸಿದ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು.
Published on
ಸೋಮವಾರಪೇಟೆ : ತೋಳೂರು ಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.
ತೋಳುನಾಡು ವ್ಯಾಪ್ತಿಯ ಗ್ರಾಮಗಳ ಸುಭಿಕ್ಷೆಗೆ ಪ್ರಾರ್ಥಿಸುವ ಮೂಲಕ ಬರ ಪರಿಸ್ಥಿತಿಯನ್ನು ದೂರವಾಗಿಸಿ ಉತ್ತಮ ಮಳೆ ಬೆಳೆಯ ಮೂಲಕ ನಾಡಿನ ನೆಮ್ಮದಿ ತರುವಂತೆ ಗ್ರಾಮಸ್ಥರು ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಪ್ರಾರ್ಥನೆ ಸಲ್ಲಿಸಿದರು. ದೊಡ್ಡಮನೆಕೊಪ್ಪ, ಊರೊಳಕೊಪ್ಪ, ಸಿಂಗನಳ್ಳಿ, ನಡ್ಲಕೊಪ್ಪ, ಇನಕನಹಳ್ಳಿ, ಹರಪಳ್ಳಿ, ವಣಗೂರುಕೊಪ್ಪ, ಶುಭಾಷ್‌ನಗರ, ಕರಡಿಕೊಪ್ಪ, ದೊಡ್ಡತೋಳೂರು, ಚಿಕ್ಕತೋಳೂರು, ಗ್ರಾಮಗಳ ವ್ಯಾಪ್ತಿಗೆ ಒಳಪಡುವ ನಿವಾಸಿಗಳು ಸುಗ್ಗಿ ಉತ್ಸವದಲ್ಲಿ ದೇವಿಗೆ ಮಡೆ ಅರ್ಪಿಸಿದರು. ಗ್ರಾಮಗಳ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಸುಗ್ಗಿ ಕುಣಿತ, ಗ್ರಾಮಸ್ಥರ ವಾದ್ಯ ಕುಣಿತ ಉತ್ಸವದಲ್ಲಿ ಆಕರ್ಷಣೀಯವಾಗಿತ್ತು. ಮಕ್ಕಳು, ಮಹಿಳೆಯರು ಸಾಂಪ್ರದಾಯಿಕ ಸುಗ್ಗಿ ಕುಣಿತದಲ್ಲಿ ಪಾಲ್ಗೊಂಡಿದ್ದರು. ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಸುಗ್ಗಿ ಕಟ್ಟೆಯ ಮುಖ್ಯ ರಂಗಕ್ಕೆ ಪ್ರದಕ್ಷಿಣೆ ಹಾಕಲಾಯಿತು. ಹರಕೆ ಮಾಡಿಕೊಂಡ ಭಕ್ತರು ಈಡುಗಾಯಿ ಸೇವೆ ಅರ್ಪಿಸಿದರು.
ಕುಟುಂಬ ಸಮೇತ ತವರಿನ ಸುಗ್ಗಿಯಲ್ಲಿ ಭಾಗವಹಿಸುವುದು, ಗ್ರಾಮದ ಹೆಣ್ಣುಮಕ್ಕಳಿಗೆ ವಿಶೇಷ.
ಈ ಭಾಗದಿಂದ ಮದುವೆಯಾಗಿ ಹೋದ ಹೆಣ್ಣು ಮಕ್ಕಳು ತವರಿನ ಸುಗ್ಗಿಯಲ್ಲಿ ಸಂಭ್ರಮದಿಂದ ಪಾಲ್ಗೊಂಡಿದ್ದ ಉಗಮನ ಸೆಳೆಯಿತು. ದೇವತಾ ಕಾರ್ಯದಲ್ಲಿ ಪ್ರದಾನ ಅರ್ಚಕರಾಗಿ ಊರೊಳಗಿನಕೊಪ್ಪದ ಡಿ.ಎನ್. ಶಿವಕುಮಾರ್, ಊರು ಒಡೆಯನ ದೇವರ ಅರ್ಚಕರಾದ ದೊಡ್ಡಮನೆ ಕೊಪ್ಪದ ಡಿ.ಎಂ.ದಿಲೀಪ್, ಮದನೆ ದೇವರ ಅರ್ಚಕರಾಗಿ ಶಿವಕುಮಾರ್, ಸುಗ್ಗಿ ಉತ್ಸವ ಸಮಿತಿ ಅಧ್ಯಕ್ಷ ಡಿ.ಎನ್. ರಾಜ್ ಗೋಪಾಲ್, ಕಾರ್ಯದರ್ಶಿ ಎಚ್. ಜೆ, ಮಹೇಶ್, ಖಜಾಂಚಿ ಎಂ.ಈ. ಕೃಷ್ಣಪ್ಪ, ಡಿ.ಪಿ. ಕುಶಾಲಪ್ಪ ಮತ್ತಿತರರು ಸುಗ್ಗಿಯ ಉಸ್ತುವಾರಿ ವಹಿಸಿದ್ದರು. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉತ್ಸವದಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net