ನಾಪೋಕ್ಲುವಿನಲ್ಲಿ ಅಮಾಯಕ ಯುವಕ ಅಪ್ಪಚಿರ ಗೌತಮ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕೊಡಗು ಎಸ್‌ಪಿಗೆ ಸೋಮವಾರ ಮಡಿಕೇರಿ ಕೊಡವ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಕೋಮುವಾದಿ ದುಷ್ಕರ್ಮಿಗಳು ಅಮಾಯಕ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆಯನ್ನು ಮಡಿಕೇರಿ ಕೊಡವ ಸಮಾಜ ತೀವ್ರವಾಗಿ ಖಂಡಿಸುತ್ತದೆ. ಸಮಾಜದ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕೃತ್ಯಗಳನ್ನು ಸಹಿಸಲಾಗುವುದಿಲ್ಲ. ತಪ್ಪಿತಸ್ಥರು ಯಾರೇ ಆಗಿದ್ದರೂ, ಎಷ್ಟೇ ಪ್ರಭಾವಿ ವ್ಯಕ್ತಿಗಳಾದರೂ, ಅವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಸಮಾಜದಲ್ಲಿ ಅಶಾಂತಿ ಹಾಗೂ ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಾರ್ಯದರ್ಶಿ ಬೊಪ್ಪಂಡ ಸರಳ ಕರುಂಬಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರಾದ ಕನ್ನಂಡ ಕವಿತ ಬೊಳ್ಳಪ್ಪ, ನಂದಿನೆರವAಡ ರವಿ ಬಸಪ್ಪ, ಮೂವೆರ ಜಯರಾಂ, ಶಾಂತೆಯAಡ ವಿಶಾಲ್ ಕಾರ್ಯಪ್ಪ, ಕಾಂಡೆರ ಲಲ್ಲು ಕುಟ್ಟಪ್ಪ, ಮಂಡಿರ ಸದಾಮುದ್ದಪ್ಪ, ಪಾಲೆಯಂಡ ರೂಪ ಮತ್ತಿತರರು ಈ ಸಂದರ್ಭ ಇದ್ದರು.