30ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ

 ಆರೋಗ್ಯ ತಪಾಸಣಾ ಶಿಬಿರ
ಆರೋಗ್ಯ ತಪಾಸಣಾ ಶಿಬಿರ
Published on
ಸೋಮವಾರಪೇಟೆ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸೋಮವಾರಪೇಟೆ ತಾಲೂಕು ಘಟಕ, ಮಾದಾಪುರ ಗ್ರಾಮ ಪಂಚಾಯಿತಿ ಹಾಗೂ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ-ಬೋಧಕ ಆಸ್ಪತ್ರೆ ಸಹಯೋಗದಲ್ಲಿ ಸಾರ್ವಜನಿಕರಿಗಾಗಿ ಮೇ 30ರಂದು ಮಾದಾಪುರ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ಮಡಿಕೇರಿ ಸರ್ಕಾರಿ ಜಿಲ್ಲಾಸ್ಪತ್ರೆಯ ನುರಿತ ವೈದ್ಯರ ತಂಡ ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಲಿದೆ.
ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ ಸೇರಿದಂತೆ ವಿವಿಧ ರೀತಿಯ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಗುತ್ತದೆ ಎಂದು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವ ಕುಂಬೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಜಾಗೃತಿ ವಹಿಸಿ ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಆರೋಗ್ಯ ತಪಾಸಣೆಯೊಂದಿಗೆ ರಕ್ತದಾನ ಶಿಬಿರವೂ ಇದೇ ಸಂದರ್ಭದಲ್ಲಿ ನಡೆಯಲಿದ್ದು, ಆರೋಗ್ಯವಂತ ಯುವಕರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬಹುದು. ಅಂಗಾಂಗ ದಾನದ ನೋಂದಣಿ ಪ್ರಕ್ರಿಯೆಯೂ ನಡೆಯಲಿದ್ದು, ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ಮನೆಯಲ್ಲಿ ದಿನನಿತ್ಯ ಬಳಸುವ ಕುಡಿಯುವ ನೀರಿನ ಪರೀಕ್ಷೆಯ ವ್ಯವಸ್ಥೆಯನ್ನೂ ಮಾಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಶಿಬಿರಕ್ಕೆ ಆಗಮಿಸುವವರು ತಮ್ಮ ಮನೆಗಳಲ್ಲಿ ಬಳಸುವ ಸುಮಾರು 1 ಲೀಟರ್ ಕುಡಿಯುವ ನೀರನ್ನು ತರಬೇಕೆಂದು ಸೂಚಿಸಲಾಗಿದೆ. ತಜ್ಞರು ನೀರಿನ ಗುಣಮಟ್ಟ ಪರಿಶೀಲಿಸಿ ಅಗತ್ಯ ಸಲಹೆಗಳನ್ನು ನೀಡಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ಆರೋಗ್ಯ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net