ಕೊಡಂಬೂರು ಭದ್ರಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಡಾ. ವೀರೇಂದ್ರ ಹೆಗ್ಗಡೆ ರವರ  ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕೊಡಂಬೂರು ಭದ್ರಕಾಳಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಯಿತು. ಪ್ರತಾಪ್ ದೇವಾಡಿಗ, , ಸರೋಜಾ, ದಮಯಂತಿ, ಸುನೀತಾ, ಮಮತಾ ಇದ್ದರು.
ಡಾ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕೊಡಂಬೂರು ಭದ್ರಕಾಳಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಯಿತು. ಪ್ರತಾಪ್ ದೇವಾಡಿಗ, , ಸರೋಜಾ, ದಮಯಂತಿ, ಸುನೀತಾ, ಮಮತಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜನೆ
  • ಡಾ. ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕ್ರಮ
ವಿರಾಜಪೇಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂರ್ನಾಡು ವಲಯದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕೊಡಂಬೂರು ಭದ್ರಕಾಳಿ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಹಾಗೂ ಅಲಂಕಾರ ಪೂಜೆಯನ್ನು ಮಂಗಳವಾರ ನಡೆಸಲಾಯಿತು.
ಪಾಲೆಮಾಡು ಗ್ರಾಮದ ಐದು ಜನ ವೃದ್ಧರಿಗೆ ಒಂದು ತಿಂಗಳಿಗೆ ಆಗುವಷ್ಟು ಗೃಹೋಪಯೋಗಿ ವಸ್ತುಗಳನ್ನು ವಿತರಿಸಲಾಯಿತು. ನಂತರ ಬಲಮುರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ ಪೆನ್‌ಗಳನ್ನು ವಿತರಿಸಲಾಯಿತು.
ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯರಾದ ವಿ.ಎಂ. ಸುಬ್ರಮಣ್ಯ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಉತ್ತಮವಾಗಿ ತಮ್ಮ ಶೈಕ್ಷಣಿಕ ಜೀವನ ನಡೆಸಲಿ. ಪೂಜ್ಯರ ಕನಸಿನಂತೆ ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಸ್ಥಾನವನ್ನು ಏರಲಿ ಎಂದು ಶುಭ ಹಾರೈಸಿದರು.
ವಲಯದ ಮೇಲ್ವಿಚಾರಕ ಪ್ರತಾಪ್ ದೇವಾಡಿಗ, ಸಮಾಜ ಸೇವಕಿ ಸರೋಜಾ, ಶಾಲೆ ಶಿಕ್ಷಕರಾದ ದಮಯಂತಿ, ಸುನೀತಾ, ಮಮತಾ, ವಲಯದ ಸೇವಾ ಪ್ರತಿನಿಧಿಗಳು ಮತ್ತು ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net