ವಿದ್ಯಾರ್ಥಿಗಳ ಏಳಿಗೆಗೆ ಭಾಷಣ ಸ್ಪರ್ಧೆ ಸಹಕಾರಿ

ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಅಶೋಕ ಸಂಗಪ್ಪ ಆಲೂರ, ಪ್ರೊ.ಎಂ.ಸುರೇಶ್, ಶಫೀರ್ ಅಹಮದ್.ಎ ಇತರರಿದ್ದರು.
ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಅಶೋಕ ಸಂಗಪ್ಪ ಆಲೂರ, ಪ್ರೊ.ಎಂ.ಸುರೇಶ್, ಶಫೀರ್ ಅಹಮದ್.ಎ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಹೇಳಿಕೆ
ಕುಶಾಲನಗರ: ಕ್ರಿಯಾಶೀಲತೆ, ನೈಪುಣ್ಯತೆ, ಕಠಿಣ ಪರಿಶ್ರಮ ರೂಢಿಸಿಕೊಂಡಿರುವ ಕೊಡಗು ಜಿಲ್ಲೆಯ ಯುವ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಈ ನಿಟ್ಟಿನಲ್ಲಿ ಭಾಷಣ ಸ್ಪರ್ಧೆ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ತಿಳಿಸಿದರು.
ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರ ಮತ್ತು ಕೊಡಗು ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಲ್ಲರಲ್ಲೂ ಪ್ರತಿಭೆ ಮತ್ತು ಕೌಶಲಗಳಿವೆ. ಆದರೆ, ಅದಕ್ಕೆ ಸೂಕ್ತ ವೇದಿಕೆ ಸಿಗಬೇಕಿದೆ. ಅಂತಹ ಅದ್ಭುತ ವೇದಿಕೆಯನ್ನು ನಮ್ಮ ಕೊಡಗು ವಿಶ್ವವಿದ್ಯಾಲಯ ಯುವಜನತೆಗಾಗಿ ಕಲ್ಪಿಸಿಕೊಡುವಲ್ಲಿ ಕಾರ್ಯನಿರತವಾಗಿದೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಪ್ರೊ.ಎಂ.ಸುರೇಶ್ ಮಾತನಾಡಿ, ಕಾರ್ಯಕ್ರಮದಲ್ಲಿ ಸ್ಪರ್ಧೆಯ ತೀರ್ಪುಗಾರರಾಗಿ ಪ್ರಸ್ತುತ ಬೆಂಗಳೂರಿನ ಕುವೆಂಪು ಕಾನೂನು ಸಂಘದ ವಕೀಲರು ಮತ್ತು ನಿವೃತ್ತ ಹಿರಿಯ ನ್ಯಾಯಾಧೀಶ ಶಫೀರ್ ಅಹಮದ್.ಎ, ಏಕ್ ಭಾರತ್ ಅಬ್ಯಾನ್ ಫೌಂಡೇಷನ್ ಸ್ಥಾಪಕರು ಮತ್ತು ಅಧ್ಯಕ್ಷರಾದ ಡಾ.ಹೊಟ್ಟೆಂಗಡ ಎ.ಜೋಯಪ್ಪ, ಎಚ್.ಡಿ.ಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಸಿ.ಪುಟ್ಟರಾಜು, ಮಡಿಲು ಗ್ರಾಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಡಿ.ಎಂ.ತ್ರಿವೇಣಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಸುದರ್ಶನ.ಕೆ.ಎನ್ ಸ್ವಾಗತಿಸಿದರು. ಕನ್ನಡ ಅಧ್ಯಯನ ವಿಭಾಗದ ಡಾ.ಜಮೀರ್ ಅಹಮದ್ ನಿರೂಪಿಸಿದರು. ಕೊಡಗು ರಾಷ್ಟ್ರೀಯ ಸೇವಾ ಯೋಜನೆ ಘಟಕದ ನೋಡಲ್ ಅಧಿಕಾರಿಗಳು ಡಾ.ದಯಾನಂದ.ಕೆ.ಸಿ ವಂದಿಸಿದರು.
ಸ್ಪರ್ಧೆಯಲ್ಲಿ ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ವಿವಿಧ ಪದವಿ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರ ಪ್ರತಿಭೆಯ ಆಧಾರದ ಮೇಲೆ ನಿರ್ಣಾಯಕರು 5 ವಿದ್ಯಾರ್ಥಿಗಳನ್ನು ರಾಜ್ಯಮಟ್ಟದಲ್ಲಿ ಕೊಡಗು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲು ಆಯ್ಕೆ ಮಾಡಿದರು. ಬಿ.ಕೆ.ಇಶಾನಿ ದೇಚಮ್ಮ, ಬಿ.ಎಸ್.ರಕ್ಷಿತಾ, ಎನ್.ಬಿ.ಮುತ್ತಮ್ಮ, ಬಿ.ಎಂ.ದರ್ಶನ್, ಕೆ.ಆರ್.ಮನ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net