ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ನಿರ್ದೇಶಕ ಎಚ್.ಎಸ್. ದೇವರಾಜ್ ಯುವಜನತೆ ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ಮೊಬೈಲ್ ಬಳಕೆಯಿಂದಾಗಿ ಯುವ ಸಮೂಹದಲ್ಲಿ ಮಾನಸಿಕ ಖಿನ್ನತೆ, ಅಸ್ವಸ್ಥತೆ ಹೆಚ್ಚಾಗುತ್ತಿದೆ. ಇದರಿಂದ ಹೊರಬರಬೇಕಾದರೆ ಕ್ರೀಡೆ ಉತ್ತಮ ಮಾರ್ಗವಾಗಿದೆ. ವಿದ್ಯಾರ್ಥಿಗಳು ಸಂಬAಧಗಳಿಗಿAತ, ಪ್ರೀತಿ ಪಾತ್ರರಿಗಿಂತ ಮೊಬೈಲ್‌ಗೆ ಹೆಚ್ಚು ಮಹತ್ವ ನೀಡುತ್ತಿದ್ದು, ಇದು ಸಮಾಜಕ್ಕೆ ಆಘಾತವನ್ನು ತಂದೊಡ್ಡಲಿದೆ. ಆದ್ದರಿಂದ ವಿದ್ಯಾರ್ಥಿಗಳು ಮೊಬೈಲ್ ದೂರ ಮಾಡಿ ತಂದೆ-ತಾಯಿಗಳಿಗೆ, ಗುರು-ಹಿರಿಯರಿಗೆ ಗೌರವ ನೀಡುವುದರೊಂದಿಗೆ ಜೀವನದಲ್ಲಿ ಉತ್ತುಂಗಕ್ಕೇರÀಬೇಕು ಎಂದು ಹೇಳಿದರು.