ಸಾಮರಸ್ಯ ಮೂಡಿಸಲು ಕ್ರೀಡೆ ಸಹಕಾರಿ

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಆಯೋಜಿಸಿದ್ದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ಡಾನ, ಕಾಲೇಜಿನ ಅಧೀಕ್ಷಕ ಜಗದೀಶ್ ಇದ್ದರು.
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಆಯೋಜಿಸಿದ್ದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ಡಾನ, ಕಾಲೇಜಿನ ಅಧೀಕ್ಷಕ ಜಗದೀಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪದ್ಮಾ ಅಭಿಮತ
  • ಕ್ರೀಡಾಕೂಟ ಉದ್ಘಾಟನೆ
ವಿರಾಜಪೇಟೆ: ಕ್ರೀಡೆ ಆರೋಗ್ಯದ ದೃಷ್ಟಿಯಿಂದ ಮಾತ್ರವಲ್ಲ, ನಮ್ಮ ನಡುವೆ ಪರಸ್ಪರ ಉತ್ತಮ ಸಂಬಂಧ ಬೆಳೆಸುವುದರೊಂದಿಗೆ ಸಾಮರಸ್ಯ ಮೂಡಿಸುತ್ತದೆ ಎಂದು ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪದ್ಮಾ ತಿಳಿಸಿದರು.
ವಿರಾಜಪೇಟೆ ಕಾವೇರಿ ಕಾಲೇಜಿನ ವತಿಯಿಂದ ಕಾಲೇಜಿನ ಮೈದಾನದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ಅಧೀನ ಸಂಸ್ಥೆಗಳ ಸಿಬ್ಬಂದಿ ವರ್ಗದಿಂದ ಗುರುವಾರ ಆಯೋಜಿಸಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯೂ ನಮ್ಮನ್ನೆಲ್ಲ ಒಂದೆಡೆ ಸೇರಿಸುವುದರಿಂದ ನಮ್ಮ ನಡುವೆ ಪರಸ್ಪರ ಪರಿಚಯ, ಸಹಕಾರ, ಸಾಮರಸ್ಯ ಮೂಡಿಸುತ್ತಿದೆ. ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯ ಅಲ್ಲ. ಅದರಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.
ಪುರುಷರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಾವೇರಿಯನ್ ವಾರಿಯರ್ಸ್ ತಂಡ ಪ್ರಥಮ ಸ್ಥಾನ ಪಡೆದರೆ, ಕಾವೇರಿಯನ್ ವಿದ್ಯಾ ಸ್ಟ್ರೈಕರ್ಸ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಪಂದ್ಯಾವಳಿಯ ಬೆಸ್ಟ್ ಕೀಪರ್ ಸೋಮನಾಥ್, ಬೆಸ್ಟ್ ಬ್ಯಾಟ್ಸ್‌ಮನ್ ನವನೀಶ್, ಬೆಸ್ಟ್ ಬೌಲರ್ ಸುಬ್ರಮಣಿ, ಬೆಸ್ಟ್ ಫೀಲ್ಡರ್ ಮಾರಣ್ಣ, ಮ್ಯಾನ್ ಆಫ್ ದಿ ಸೀರಿಯಸ್ ಪ್ರಶಸ್ತಿಯನ್ನು ಪೆಮ್ಮಯ್ಯ ಪಡೆದುಕೊಂಡರು. ಪುರುಷರ ಹಗ್ಗಜಗ್ಗಾಟದಲ್ಲಿ ಕಾವೇರಿಯನ್ ಟೈಗರ್ ತಂಡ ಪ್ರಥಮ ಸ್ಥಾನ ಪಡೆಯಿತು. ಕಾವೇರಿಯನ್ ವಾರಿಯರ್ಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಮಹಿಳೆಯರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ರೆಡ್ ತಂಡ ಪ್ರಥಮ ಸ್ಥಾನ ಪಡೆಯಿತು. ವಿರಾಜಪೇಟೆ ಕಾವೇರಿ ಕಾಲೇಜಿನ ವೈಟ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಬೆಸ್ಟ್ ಕ್ಯಾಚರ್ ಲತಾ, ಬೆಸ್ಟ್ ಸರ್ವರ್ ಸೀಮಾ, ಪ್ಲೇಯರ್ ಆಫ್ ದ ಟೂರ್ನಮೆಂಟ್ ಪ್ರಶಸ್ತಿಯನ್ನು ಲೇಪಾಕ್ಷಿ ಪಡೆದುಕೊಂಡರು. ಮಹಿಳೆಯರ ಹಗ್ಗ ಜಗ್ಗಾಟ ವಿಭಾಗದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ವೈಟ್ ತಂಡ ಪ್ರಥಮ ಸ್ಥಾನ ಪಡೆಯಿತು. ವಿರಾಜಪೇಟೆ ಕಾವೇರಿ ಕಾಲೇಜಿನ ಬ್ಲಾಕ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ಡಾನ, ಕಾಲೇಜಿನ ಅಧೀಕ್ಷಕ ಜಗದೀಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net