ಶ್ರೀ ಚಾಮುಂಡೇಶ್ವರಿ ಪರಿವಾರ ದೇವರ ವಾರ್ಷಿಕೋತ್ಸವ

ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 48ನೇ ವಾರ್ಷಿಕ ಮಹೋತ್ಸವಕ್ಕೆ ದೇವಾಲಯವನ್ನು ಅಲಂಕಾರಗೊಳಿಸಿರುವುದು.
ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 48ನೇ ವಾರ್ಷಿಕ ಮಹೋತ್ಸವಕ್ಕೆ ದೇವಾಲಯವನ್ನು ಅಲಂಕಾರಗೊಳಿಸಿರುವುದು.
Published on
ಸುಂಟಿಕೊಪ್ಪ: ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 48ನೇ ವಾರ್ಷಿಕ ಮಹೋತ್ಸವಕ್ಕೆ ಏ.20ರಿಂದ 23ರವರೆಗೆ ವಿವಿಧ ಪೂಜೆ ಮತ್ತು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಿಧ್ಯುಕ್ತವಾಗಿ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಏ.13ರಂದು ಮುನಿಶ್ವರ ಪೂಜೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿತ್ತು. 14ರಂದು ಮಹಾಚಂಡಿಕಾಯಾಗ ನಡೆದು ಸನ್ನ ಸಂತರ್ಪಣೆ ಕಾರ್ಯ ನಡೆಯಿತು. 17ರಂದು ಶ್ರೀ ಮಹಾ ವಿಷ್ಣುವಿನ ಪೂಜೆ ನಡೆಯಿತು. ಏ.20 ರ ಸೋಮವಾರ ಪೂರ್ವಾಹ್ನ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಸಂಜೆ 7 ಗಂಟೆಯಿಂದ ದೀಪಾರಾಧನೆ ಏಳು ಸುತ್ತಿನ ಪ್ರದಕ್ಷಿಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ಜರುಗಲಿದೆ. ಮಂಗಳವಾರ ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ, ಪೂಜೆ ನಡೆಯಲಿದೆ. ಏ.21ರ ಮಂಗಳವಾರ ರಾತ್ರಿಯಿಂದ ವಿವಿಧ ದೈವಗಳ ಕೋಲ ನಡೆಯಲ್ಲಿದ್ದು, 22ರಂದು ಪೂರ್ವಾಹ್ನ ಅಜ್ಜಪ್ಪ ಕೋಲ, ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲದೊಂದಿಗೆ ರಾತ್ರಿ 8 ಗಂಟೆಗೆ ಶ್ರೀದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ಶ್ರೀಕುಂದುರುಮೊಟ್ಟೆ ಚಾಮುಂಡೇಶ್ವರಿ ದೇವಾಲಯ ಸಮಿತಿ ತಿಳಿಸಿದೆ.
ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 48ನೇ ವಾರ್ಷಿಕ ಮಹೋತ್ಸವಕ್ಕೆ ದೇವಾಲಯವನ್ನು ಅಲಂಕಾರಗೊಳಿಸಿರುವುದು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net