16ರಂದು ಶ್ರೀ ಗವಿಸಿದ್ದೇಶ್ವರ ಜಾತ್ರೆ

ಶ್ರೀ ಗವಿಸಿದ್ದೇಶ್ವರ ಸ್ವಾಮಿ
ಶ್ರೀ ಗವಿಸಿದ್ದೇಶ್ವರ ಸ್ವಾಮಿ
Published on
ಶನಿವಾರಸಂತೆ: ಶಿವರಾತ್ರಿ ಹಬ್ಬದ ಪ್ರಯುಕ್ತ ಸಮೀಪದ ಬೆಸೂರು ಗ್ರಾ.ಪಂ.ಗೆ ಸೇರಿದ ಆಗಳಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಉದ್ಭವ ಶ್ರೀ ಗವಿಸಿದ್ದೇಶ್ವರ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಫೆ.16ರಂದು ನಡೆಯಲಿದೆ.
ಅಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆವರೆಗೆ ಬೆಟ್ಟದ ಮೇಲಿರುವ ದೇವಸ್ಥಾನದಲ್ಲಿ ಶ್ರೀ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗುತ್ತದೆ. ಹಣ್ಣು ಕಾಯಿ ಅಭಿಷೇಕ, ಷೋಡಶೋಪಚಾರ, ಪುಷ್ಪಾರ್ಚನೆ, ಮಹಾ ಮಂಗಳಾರತಿ ನಡೆಯಲಿದೆ.
ಜಾತ್ರೋತ್ಸವದ ಅಂಗವಾಗಿ 13ರಂದು ಬೆಳಗ್ಗೆ 8ಕ್ಕೆ ಯಡಿಯೂರಿನ ನಂದೀಶ ಗುರೂಜಿ ನೇತೃತ್ವದಲ್ಲಿ ಶ್ರೀ ಗವಿಸಿದ್ದೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಗಣ ಹೋಮ, ನವಗ್ರಹ, ಮಹಾಮೃತ್ಯುಂಜಯ ಹೋಮ ಮುಂತಾದ ಪೂಜಾ ವಿಧಿ ವಿಧಾನ ನೆರವೇರಿಸಲಾಗುತ್ತದೆ. 14ರಂದು ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ವರೆಗೆ ಪುರುಷರಿಗೆ ವಾಲಿಬಾಲ್ ಪಂದ್ಯಾವಳಿ, ಮಧ್ಯಾಹ್ನ 3ಕ್ಕೆ ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾವಳಿ ಮತ್ತು ಹಿರಿಯರಿಗೆ ಸರಳ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net