13ನೇ ವರ್ಷದ ಸಂಸ್ಮರಣೋತ್ಸವ 19ಕ್ಕೆ

 ಪತ್ರಿಕಾಗೋಷ್ಠಿಯಲ್ಲಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಸಾಂಬಶಿವಯ್ಯ, ಖಜಾಂಚಿ ಉದಯಕುಮಾರ್, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ. ಎಸ್. ಮೂರ್ತಿ, ಕುಶಾಲನಗರ ತಾಲೂಕು ವೀರಶೈವ ಮಹಾಸಭಾಧ್ಯಕ್ಷ ಹೆಚ್.ಎಂ. ಮಧುಸೂದನ್, ಸಮಾಜದ ಪ್ರಮುಖರಾದ ಎಂ.ಎಸ್. ಗಣೇಶ್ ಇದ್ದರು.
ಪತ್ರಿಕಾಗೋಷ್ಠಿಯಲ್ಲಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಸಾಂಬಶಿವಯ್ಯ, ಖಜಾಂಚಿ ಉದಯಕುಮಾರ್, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ. ಎಸ್. ಮೂರ್ತಿ, ಕುಶಾಲನಗರ ತಾಲೂಕು ವೀರಶೈವ ಮಹಾಸಭಾಧ್ಯಕ್ಷ ಹೆಚ್.ಎಂ. ಮಧುಸೂದನ್, ಸಮಾಜದ ಪ್ರಮುಖರಾದ ಎಂ.ಎಸ್. ಗಣೇಶ್ ಇದ್ದರು.
Published on
ಕುಶಾಲನಗರ: ಕುಶಾಲನಗರ ತಾಲೂಕಿನ ತೊರೆನೂರು ವಿರಕ್ತ ಮಠದ ಹಿರಿಯ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಅವರ 13ನೇ ವರ್ಷದ ಸಂಸ್ಮರಣೋತ್ಸವ ಸಮಾರಂಭವನ್ನು ಫೆ.19ರಂದು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಲ್ಲೇಶ ಸ್ವಾಮೀಜಿ ತಿಳಿಸಿದ್ದಾರೆ.
ತೊರೆನೂರು ವಿರಕ್ತ ಮಠ ಶ್ರೀ ಮರುಳ ಸಿದ್ದೇಶ್ವರ ಸ್ವಾಮೀಜಿಯವರ ತಪೋಕ್ಷೇತ್ರ. ವಿರಕ್ತಮಠದ ಶ್ರೀ ಮರುಳಸಿದ್ದೇಶ್ವರ ಸ್ವಾಮೀಜಿ ಹಾಗೂ ನಿಕಟಪೂರ್ವ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಅವರ 13ನೇ ವರ್ಷದ ಸಂಸ್ಮರಣೋತ್ಸವ ಅಂದು ಮಧ್ಯಾಹ್ನ 10.30 ಗಂಟೆಗೆ ಜರುಗಲಿದೆ. ಸುತ್ತೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಧಾರ್ಮಿಕ ಕಾರ್ಯಕ್ರಮವನ್ನು ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಉದ್ಘಾಟಿಸಲಿದ್ದು, ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೊಡಗು ಜಿಲ್ಲೆಯ ವಿವಿಧ ಮಠಗಳ ಮಠಾಧೀಶರು ಆಗಮಿಸುವರು. ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಅನುಭಾವ ನುಡಿಗಳನ್ನಾಡುವರು. ಮಾಜಿ ಸಚಿವ ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಎಚ್.ವಿ.ಶಿವಪ್ಪ ಭಾಗವಹಿಸುವರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶಿರಂಗಾಲದ ಎಸ್.ವಿ.ನಂಜುಂಡಪ್ಪ, ಆಲೂರು ಸಿದ್ದಾಪುರದ ಜೆ.ಎಸ್.ವಿರೂಪಾಕ್ಷಯ್ಯ, ಹೆಬ್ಬಾಲೆಯ ಮರೂರಿನ ಎಚ್.ವಿ.ಶಿವರುದ್ರಪ್ಪ, ತೊರೆನೂರು ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಜಗದೀಶ್, ಸಮಾಜದ ಸಂಪನ್ಮೂಲ ಶಿಕ್ಷಕಿ ಡಾ.ಜಿ.ಎಂ.ಹೇಮಲತಾ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ ಮಾತನಾಡಿ, ಮಠ ಹಾಗೂ ಭಕ್ತರ ನಡುವೆ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಪ್ರತಿ ತಿಂಗಳ ಹುಣ್ಣಿಮೆಯಂದು ಚಿಂತನಾಗೋಷ್ಠಿ, ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ ಎಂದರು.
ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಸಾಂಬಶಿವಯ್ಯ, ಖಜಾಂಚಿ ಉದಯಕುಮಾರ್, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಮೂರ್ತಿ, ಕುಶಾಲನಗರ ತಾಲೂಕು ವೀರಶೈವ ಮಹಾಸಭಾಧ್ಯಕ್ಷ ಎಚ್.ಎಂ.ಮಧುಸೂದನ್, ಸಮಾಜದ ಪ್ರಮುಖರಾದ ಎಂ.ಎಸ್.ಗಣೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net