ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೯೯೧ ಬ್ಯಾಚ್‌ನಿಂದ ೨೦೨೪ರವರೆಗೆ ಸುಮಾರು ೪,೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಾಂಗ ಮಾಡಿದ್ದಾರೆ. ಅವರನ್ನು ಒಂದೆಡೆ ಸೇರಿಸುವ ದೃಷ್ಠಿಯಿಂದ ಕ್ರೀಡಕೂಟ ಹಮ್ಮಿಕೊಳ್ಳಲಾಗುತ್ತಿದೆ. ಸಂಘದ ಸದಸ್ಯರಿಗಾಗಿ ಕ್ರಿಕೆಟ್, ವಾಲಿಬಾಲ್, ಥ್ರೋಬಾಲ್ ಪಂದ್ಯಾವಳಿ ನಡೆಯಲಿದೆ. ಮುಕ್ತವಾಗಿ ಫುಟ್ಬಾಲ್ ಪಂದ್ಯಾವಳಿ ನಡೆಯಲಿದ್ದು, ಇದೇ ಸಂದರ್ಭದಲ್ಲಿ ೧೬ವರ್ಷದೊಳಗಿನ ಬಾಲಕ, ಬಾಲಕಿಯರಿಗೆ ಶಾಲಾ ಮಟ್ಟದಲ್ಲಿ ಫುಟ್ಬಾಲ್ ಪಂದ್ಯಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.