ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಸಂಘದ ನಿರ್ದೇಶಕರಾದ ಎಸ್.ಹೊನ್ನೇಗೌಡ, ಜಿಲ್ಲಾ ಕಾರ್ಯದರ್ಶಿ ಬಿ.ಜಿ.ಸಂದೀಪ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಜಿಲ್ಲಾ ಖಜಾಂಜಿ ಪಿ.ಡಿ.ರಾಜೇಶ್, ರಾಜ್ಯ ಪರಿಷತ್ತಿನ ಸದಸ್ಯರಾದ ಪಿ.ಎಂ.ಬಾಬು, ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಕೆ.ಎಂ.ತಿಮ್ಮಯ್ಯ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಾಧ್ಯಕ್ಷ ಮೋಹನ್ ಪೆರಾಜೆ, ಗೌರವಾಧ್ಯಕ್ಷ ಶಮ್ಮಿ.ಎಸ್.ಟಿ, ಇತರರು ಇದ್ದರು. ಹಾಕಿ ಸೇರಿದಂತೆ ವಿವಿಧ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.