ಇದೇ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಿದ 30 ಜನರನ್ನು ಗೌರವಿಸಲಾಯಿತು. ಈ ಕಾರ್ಯಕ್ಕೆ ಪ್ರೇರೇಪಣೆ ನೀಡಿದ ವಿರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್, ವೃತ್ತನಿರೀಕ್ಷಕ ಶಿವಮೂರ್ತಿಯವರನ್ನು ಸನ್ಮಾನಿಸಿದರು. ಕುಟ್ಟ ಠಾಣಾಧಿಕಾರಿ ತಮ್ಮಯ್ಯ, ಶ್ರೀಮಂಗಲ ಠಾಣಾಧಿಕಾರಿ ರವೀಂದ್ರ, ಪೊಲೀಸ್ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.