ಮಾದಕ ವಸ್ತುಗಳಿಂದ ದೂರವಿರಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಹೇಮಂತ್ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಹೇಮಂತ್ ಮಾತನಾಡಿದರು.
Published on

ನಾಪೋಕ್ಲು: ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ತೀವ್ರ ತರಹದ ಪರಿಣಾಮ ಬೀರುವುದಲ್ಲದೆ ಸಮಾಜದ ಸ್ವಾಸ್ಥ್ಯವೂ ಕೆಡುತ್ತದೆ. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿತುಕೊಂಡು ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು ಎಂದು ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹೇಮಂತ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲೂಕಿನ ಭಾಗಮಂಡಲ ಕಾರ್ಯಕ್ಷೇತ್ರದ ವತಿಯಿಂದ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಆರೋಗ್ಯದ ಕಡೆ ಗಮನ ಹರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಘದ ಭಾಗಮಂಡಲ ವಲಯ ಮೇಲ್ವಿಚಾರಕ ಸಂತೋಷ್, ಸೇವಾ ಪ್ರತಿನಿಧಿ ವೆಂಕಟ್ರಮಣ, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net