ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾತನಾಡಿ, ಕೊಡಗು ಜಿಲ್ಲೆ ಪ್ರವಾಸೋದ್ಯಮಕ್ಕೆ ಉತ್ತಮ ಪರಿಸರ ಹೊಂದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಅತ್ಯುತ್ತಮ ಸುಧಾರಿತ ಪ್ರವಾಸಿ ಸ್ಥಳವನ್ನಾಗಿ ಮಾಡಲು ಯೋಜನೆ ರೂಪಿಸಲಾಗುವುದು. ಪ್ರತಿ ತಾಲೂಕಿನಲ್ಲೂ ಪ್ರಮುಖ ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಹೋಟೆಲ್ ನಿರ್ಮಾಣ ಮಾಡಲು ಸರ್ಕಾರದಿಂದ ಶೇ.25 ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.