ಜನ ಜಾಗೃತಿಗೆ ಬೀದಿ ನಾಟಕ ಸಹಕಾರಿ

ವಿರಾಜಪೇಟೆ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಣಗೇರಿಯಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಬೀದಿನಾಟಕ ಆಯೋಜಿಸಲಾಗಿತ್ತು. ವಿಠ್ಠಲ್ ಸಾಲಿಯಾನ್, ಮೂಕೊಂಡ ಶಶಿ ಸುಬ್ರಮಣಿ, ಪ್ರಾಥಮಿಕ ಶಾಲಾ ಶಿಕ್ಷಕ ಮಹೇಶ್, ಸೌಮ್ಯಾ, ನಂದಿನಿ, ಸಂದೀಪ್ ಇದ್ದರು.
ವಿರಾಜಪೇಟೆ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಣಗೇರಿಯಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಬೀದಿನಾಟಕ ಆಯೋಜಿಸಲಾಗಿತ್ತು. ವಿಠ್ಠಲ್ ಸಾಲಿಯಾನ್, ಮೂಕೊಂಡ ಶಶಿ ಸುಬ್ರಮಣಿ, ಪ್ರಾಥಮಿಕ ಶಾಲಾ ಶಿಕ್ಷಕ ಮಹೇಶ್, ಸೌಮ್ಯಾ, ನಂದಿನಿ, ಸಂದೀಪ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮೂಕೊಂಡ ಶಶಿ ಸುಬ್ರಮಣಿ ಅಭಿಮತ
ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಅಮ್ಮತ್ತಿ ವಲಯದ ಚೆಂಬೆಬೆಳ್ಳೂರು ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ದೇವಣಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಬೀದಿ ನಾಟಕ ಆಯೋಜಿಸಲಾಗಿತ್ತು.
ಜನಜಾಗೃತಿ ಸಮಿತಿ ಸದಸ್ಯರಾದ ಮೂಕೊಂಡ ಶಶಿ ಸುಬ್ರಮಣಿ ಮಾತನಾಡಿ, ಬೀದಿ ನಾಟಕದ ಮುಖಾಂತರ ಜನರಿಗೆ ಮನಮುಟ್ಟುವಂತೆ ಜಾಗೃತಿ ಮೂಡಿಸಬಹುದು ಎಂದು ತಿಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ವಿಠ್ಠಲ್ ಸಾಲಿಯಾನ್ ಮಾತನಾಡಿ, ನಿಸರ್ಗ ಕಲಾಭಿವೃದ್ಧಿ ಬೀದಿ ನಾಟಕ ಕಲಾತಂಡದವರು ಸ್ವಚ್ಛತೆ ಬಗ್ಗೆ ಹಾಗೂ ನೀರಿನ ಸದ್ಬಳಕೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಔಷಧೀಯ ಸಸ್ಯ ಸಂಕುಲವಿರುವ ಪ್ರದೇಶವಾಗಿದ್ದು, ಇದರ ಉಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.
ಶಿಕ್ಷಕರಾದ ಮಹೇಶ್, ಸೌಮ್ಯಾ, ನಂದಿನಿ, ಸಂದೀಪ್, ತಾಲೂಕು ಯೋಜನಾಧಿಕಾರಿ ಹರೀಶ್, ಒಕ್ಕೂಟದ ಅಧ್ಯಕ್ಷೆ ಶಶಿಕಲಾ, ವಲಯದ ಮೇಲ್ವಿಚಾರಕ ದಾನೇಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಉಷಾರಾಣಿ, ಸೇವಾ ಪ್ರತಿನಿಧಿ ದೇವಕಿ ಇತರರು ಇದ್ದರು. ನಿಸರ್ಗ ಕಲಾಭಿವೃದ್ಧಿ ತಂಡದ ಸದಸ್ಯರು, ನೀರಿನ ಸದ್ಬಳಕೆ, ಪ್ಲಾಸ್ಟಿಕ್ ದುಷ್ಪರಿಣಾಮ, ದುಶ್ಚಟಗಳ ಬಗ್ಗೆ ನಾಟಕದ ಮೂಲಕ ಜಾಗೃತಿ ಮೂಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net