ಚೆರಿಯಪರಂಬು ಪೈಸಾರಿ ನಿವಾಸಿ ಗಣೇಶ್ ಹಾಗೂ ಜಾನಕಿ ದಂಪತಿ ಪುತ್ರಿ ಹಾಗೂ ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿ ಚಿತ್ರಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕಳೆದ ಒಂದು ತಿಂಗಳಿನಿಂದ ಚಿತ್ರಾ ಕಾಲೇಜಿಗೆ ಹೋಗದೆ ಮನೆಯಲ್ಲಿ ಇದ್ದಳು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ಪಾಲಕರು ಕೆಲಸಕ್ಕೆ ತೆರಳಿದ ಸಂದರ್ಭ ಮನೆಯ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತಂದೆ ಗಣೇಶ್ ನೀಡಿದ ದೂರಿನ ಅನ್ವಯ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.