ಕರಾಟೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ಮೈಸೂರು ಟೆರೆಷಿಯನ್ ಕಾಲೇಜಿನಲ್ಲಿ ನಡೆದ ಮೈಸೂರು ಓಪನ್ ಆಲ್ ಇಂಡಿಯಾ ಕರಾಟೆ ಪಂದ್ಯಾವಳಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು. ಚೆಟ್ಟಿಯಾರಂಡ ದಿಲನ್ ತಿಮ್ಮಯ್ಯ, ಧೀರಜ್ ಕಾರ್ಯಪ್ಪ ಇತರರಿದ್ದರು.
ಮೈಸೂರು ಟೆರೆಷಿಯನ್ ಕಾಲೇಜಿನಲ್ಲಿ ನಡೆದ ಮೈಸೂರು ಓಪನ್ ಆಲ್ ಇಂಡಿಯಾ ಕರಾಟೆ ಪಂದ್ಯಾವಳಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು. ಚೆಟ್ಟಿಯಾರಂಡ ದಿಲನ್ ತಿಮ್ಮಯ್ಯ, ಧೀರಜ್ ಕಾರ್ಯಪ್ಪ ಇತರರಿದ್ದರು.
Published on
ನಾಪೋಕ್ಲು: ಮೈಸೂರು ಟೆರೆಷಿಯನ್ ಕಾಲೇಜಿನಲ್ಲಿ ಇತ್ತೀಚಿಗೆ ನಡೆದ ಮೈಸೂರು ಓಪನ್ ಆಲ್ ಇಂಡಿಯಾ ಕರಾಟೆ ಪಂದ್ಯಾವಳಿಯಲ್ಲಿ ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಲಚನ್ ಪೊನ್ನಣ್ಣ ಹಾಗೂ ಲಿಯಾನ್ ಕರುಂಬಯ್ಯ ಭಾಗವಹಿಸಿ ಕಟಾ ವಿಭಾಗದಲ್ಲಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.
ಜತೆಗೆ ನಾಪೋಕ್ಲು ಸೆಕ್ರೆಡ್ ಹಾರ್ಟ್ಸ್ ಶಾಲೆಯ ವಿದ್ಯಾರ್ಥಿ ದೈವಿಕ್ ಕಟಾ ವಿಭಾಗದಲ್ಲಿ ದ್ವಿತೀಯ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಇವರು ಚೆಟ್ಟಿಯಾರಂಡ ದಿಲನ್ ತಿಮ್ಮಯ್ಯ ಹಾಗೂ ಧೀರಜ್ ಕಾರ್ಯಪ್ಪ ಅವರಿಂದ ತರಬೇತು ಪಡೆಯುತ್ತಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net