ವಿದ್ಯಾರ್ಥಿಗಳೇ ಶಿಸ್ತು ರೂಢಿಸಿಕೊಳ್ಳಿ

ಸೋಮವಾರಪೇಟೆ ತಾಲೂಕಿನ ಚೌಡ್ಲು ಕುವೆಂಪು ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪುಟಾಣಿ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವೇಷಧರಿಸಿ ಗಮನ ಸೆಳೆದರು. ಜಗದೀಶ್, ಚಂದ್ರಕುಮಾರ್ ಇತರರು ಇದ್ದರು.
ಸೋಮವಾರಪೇಟೆ ತಾಲೂಕಿನ ಚೌಡ್ಲು ಕುವೆಂಪು ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪುಟಾಣಿ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವೇಷಧರಿಸಿ ಗಮನ ಸೆಳೆದರು. ಜಗದೀಶ್, ಚಂದ್ರಕುಮಾರ್ ಇತರರು ಇದ್ದರು.
Published on

ಸೋಮವಾರಪೇಟೆ: ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಾಜಿ ಸೈನಿಕ ಎನ್.ಯು.ಚಂದ್ರಕುಮಾರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಜರು ಹಾಗೂ ಹೋರಾಟಗಾರರು ಅಪಾರ ತ್ಯಾಗ ಮಾಡಿದ್ದಾರೆ. ದೇಶದ ಗಡಿಯಲ್ಲಿ ಸೈನಿಕರು ಹಗಲು-ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ತ್ಯಾಗ ಮತ್ತು ಸೇವೆಯಿಂದ ದೇಶದ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ದೇಶದ ರಕ್ಷಣೆಯಲ್ಲಿ ಭಾರತೀಯ ಸೇನೆಯ ಪಾತ್ರ ಮಹತ್ವದ್ದು ಎಂದು ಇದೇ ವೇಳೆ ಸ್ಮರಿಸಿದರು.
ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ಶಿಸ್ತು, ಸಮಯಪಾಲನೆ, ದೇಶಪ್ರೇಮ ಹಾಗೂ ಉತ್ತಮ ಆರೋಗ್ಯದ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು, ನಿತ್ಯ ವ್ಯಾಯಾಮ ಹಾಗೂ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಉತ್ತಮ ದೈಹಿಕ ಸಾಮರ್ಥ್ಯ ಹೊಂದಿರುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸೇನೆಗೆ ಸೇರಿ ದೇಶ ಸೇವೆ ಮಾಡುವ ಗುರಿ ಹೊಂದಬೇಕು ಎಂದು ಕರೆ ನೀಡಿದರು.
ವಿದ್ಯಾಸಂಸ್ಥೆಯ ಬಾತ್ಮಿದಾರ ಕೆ.ಎಂ.ಜಗದೀಶ್, ನಿರ್ದೇಶಕ ಕೆ.ಟಿ.ಪರಮೇಶ್, ಪ್ರಾಂಶುಪಾಲೆ ಮಿಲ್‌ಡ್ರೆಡ್ ಗೋನ್ಸಾಲ್ವೆಸ್, ಕಾಫಿ ಮಂಡಳಿ ಎಸ್‌ಎಲ್‌ಒ ಉಪೇಂದ್ರ ಕುಮಾರ್ ಇದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net