ಹಾಸ್ಟೆಲ್‌ನಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಂದೇ ಆಹಾರವನ್ನು ಸೇವಿಸಿದ್ದು, ಅವರಲ್ಲಿ ಕೇವಲ 9 ವಿದ್ಯಾರ್ಥಿಗಳಿಗೆ ಮಾತ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಒಂದು ದಿನದ ಮಟ್ಟಿಗೆ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸಂಪೂರ್ಣ ಚೇತರಿಸಿಕೊಂಡ ನಂತರ ಮನೆಗೆ ಕಳುಹಿಸಲಾಗಿದೆ ಎಂದು ಪತ್ರಿಕೆಗೆ ತಿಳಿಸಿದ್ದಾರೆ.