ವಿದ್ಯಾರ್ಥಿಗಳೇ, ಸಿಕ್ಕ ಅವಕಾಶ ಬಳಸಿಕೊಳ್ಳಿ

ಶನಿವಾರಸಂತೆಯ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್, ಸುರೇಂದ್ರ, ಚಂದ್ರಕಾಂತ್, ಹರೀಶ್, ಅಶೋಕ್, ಪೊನ್ನಪ್ಪ ಇತರರಿದ್ದರು.
ಶನಿವಾರಸಂತೆಯ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್, ಸುರೇಂದ್ರ, ಚಂದ್ರಕಾಂತ್, ಹರೀಶ್, ಅಶೋಕ್, ಪೊನ್ನಪ್ಪ ಇತರರಿದ್ದರು.
Published on
ಶನಿವಾರಸಂತೆ: ಪ್ರಸ್ತುತ ವಿದ್ಯಾರ್ಥಿಗಳಿಗೆ ಅನೇಕ ಅವಕಾಶಗಳಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಭಾರತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಸ್.ಎನ್.ಮೋಹನ್‌ಕುಮಾರ್ ಸಲಹೆ ನೀಡಿದರು.
ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಿಮ ವರ್ಷದ ಬಿ.ಎ ಹಾಗೂ ಬಿ.ಕಾಂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳು ಉತ್ತಮ ಸಂಸ್ಕಾರ ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ನಮ್ಮ ಮೇಲೆ ನಮಗೆ ಆತ್ಮ ವಿಸ್ವಾಸವಿರಬೇಕು. ಹಾಗಿದ್ದಾಗ ಮಾತ್ರ ನಮ್ಮ ಕನಸು ನನಸಾಗಲು ಸಾಧ್ಯ ಎಂದರು.
ಉಪನ್ಯಾಸಕ ಎ.ಎಚ್.ಚಂದ್ರಕಾಂತ್ ಮಾತನಾಡಿ, ಪ್ರಸ್ತುತ ಮೊಬೈಲ್ ಅನಿವಾರ್ಯ. ಆದರೆ ಯಾವುದಕ್ಕೆ ಯಾವ ಸಂದರ್ಭದಲ್ಲಿ ಬಳಕೆ ಮಾಡಬೇಕು ಎಂಬ ಜ್ಞಾನ ಇರಬೇಕು. ವಿದ್ಯಾರ್ಥಿ ಜೀವನದಲ್ಲಿ ಅನೇಕ ತಪ್ಪು ನಡೆಯುವುದು ಸಾಮಾನ್ಯ. ಅದಕ್ಕೆ ಅನೇಕ ಸಂದರ್ಭದಲ್ಲಿ ವಿನಾಯಿತಿ ನೀಡಲಾಗುತ್ತದೆ. ಆದರೆ, ಸಾರ್ವಜನಿಕ ಜೀವನಕ್ಕೆ ಬಂದಾಗ ವಿನಾಯಿತಿ ಇರುವುದಿಲ್ಲ. ಹಾಗಾಗಿ ಯಾವುದೇ ತಪ್ಪು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸಕ ಡಿ.ಈ.ಸುರೇಂದ್ರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು. ಪಾಲಕರಿಗೆ ಹೊರೆಯಗದೆ, ಕಾಲಹರಣ ಮಾಡದೆ ಜೀವನ ರೂಪಿಸಿಕೊಳ್ಳಬೇಕು ಎಂದರು.
ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಜೆ.ಅಶೋಕ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಹರೀಶ್ ಮಾಗಲು, ಬಿ.ಎಂ.ಪೊನ್ನಪ್ಪ, ಗ್ರಂಥಾಪಾಲಕಿ ಕೆ.ವಿ.ಆಶಿತಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net