ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದಿರಲಿ

ಸಿದ್ದಾಪುರ ಸಂತ ಅನ್ನಮ್ಮ ಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮಾತನಾಡಿದರು. ಶಾಲೆಯ ಶಿಕ್ಷಕರು, ಠಾಣೆಯ ಸಿಬ್ಬಂದಿ ಇದ್ದರು.
ಸಿದ್ದಾಪುರ ಸಂತ ಅನ್ನಮ್ಮ ಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮಾತನಾಡಿದರು. ಶಾಲೆಯ ಶಿಕ್ಷಕರು, ಠಾಣೆಯ ಸಿಬ್ಬಂದಿ ಇದ್ದರು.
Published on
ಸಿದ್ದಾಪುರ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಸಂತ ಅನ್ನಮ್ಮ ಶಾಲೆಯಲ್ಲಿ ಮಂಗಳವಾರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ವಿದ್ಯಾರ್ಥಿಗಳು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ ಶಿಕ್ಷಣ, ಕ್ರೀಡೆ ಹಾಗೂ ಉತ್ತಮ ಸಂಸ್ಕಾರಗಳತ್ತ ಗಮನಹರಿಸಿ ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net